ಭಾರತ, ಏಪ್ರಿಲ್ 5 -- ಐಪಿಎಲ್‌ನಲ್ಲಿ ಸ್ಫೋಟಕ ಬ್ಯಾಟಿಂಗ್‌ ಲೈನಪ್‌ ಹೊಂದಿರುವ ಸನ್‌ರೈಸರ್ಸ್ ಹೈದರಾಬಾದ್ (SRH) ತಂಡವು, ಈ ಬಾರಿ ಬ್ಯಾಟಿಂಗ್‌ನಲ್ಲಿ ಮಂಕಾಗಿದೆ. ಸತತ ಮೂರು ಪಂದ್ಯಗಳಲ್ಲಿ ಸೋತಿರುವ ತಂಡದ ನೈಜ ಸಾಮರ್ಥ್ಯ ಹೊರಬರುತ್ತಿಲ್ಲ. ಅತ್ತ ಗುಜರಾತ್‌ ತಂಡವು (GT) ಮೊದಲ ಪಂದ್ಯದಲ್ಲಿ ಸೋತರೂ, ಆ ಬಳಿಕ ಸತತ ಎರಡು ಪಂದ್ಯಗಳಲ್ಲಿ ಗೆದ್ದು ಬೀಗುತ್ತಿದೆ. ತಂಡಕ್ಕೆ ಸಾಯಿ ಸುದರ್ಶನ್ ಮತ್ತು ಜೋಸ್ ಬಟ್ಲರ್ ಅವರ ಸ್ಥಿರ ಕೊಡುಗೆ ಸಿಗುತ್ತಿದ್ದು, ತಂಡದ ಗೆಲುವಿನಲ್ಲಿ ಪ್ರಮುಖ ಪಾತ್ರ ವಹಿಸುತ್ತಿದೆ. ಸದ್ಯ ಅಂಕಪಟ್ಟಿಯಲ್ಲಿ 3ನೇ ಸ್ಥಾನದಲ್ಲಿರುವ ತಂಡ ಟೂರ್ನಿಯಲ್ಲಿ ಗೆಲುವಿನ ಓಟ ಮುಂದುವವರೆಸಲು ಎದುರು ನೋಡುತ್ತಿದೆ.

ಏಪ್ರಿಲ್‌ 6ರ ಭಾನುವಾರ ನಡೆಯುತ್ತಿರುವ ಪಂದ್ಯದಲ್ಲಿ ಸನ್‌ರೈಸರ್ಸ್‌ ಹೈದರಾಬಾದ್‌ ಹಾಗೂ ಗುಜರಾತ್‌ ಟೈಟನ್ಸ್‌ (Sunrisers Hyderabad vs Gujarat Titans) ತಂಡಗಳು ಮುಖಾಮುಖಿಯಾಗುತ್ತಿದ್ದು, ಪಂದ್ಯವು ಸಂಜೆ 7:30ಕ್ಕೆ ಆರಂಭವಾಗಲಿದೆ. ಎಸ್‌ಆರ್‌ಎಚ್‌ ತವರು ಮೈದಾನ ಹೈದರಾಬಾದ್‌ನ ರಾಜೀವ್‌ ಗಾಂಧಿ ಸ್...