Bangalore, ಮಾರ್ಚ್ 16 -- IPS Positing: ಕೋಟ್ಯಂತರ ರೂ. ಮೌಲ್ಯದ ಚಿನ್ನವನ್ನು ದುಬೈನಿಂದ ಅಕ್ರಮವಾಗಿ ಸಾಗಣೆ ಮಾಡಲು ಪೊಲೀಸ್‌ ಶಿಷ್ಟಾಚಾರ ದುರುಪಯೋಗಪಡಿಸಿಕೊಂಡ ಪ್ರಕರಣದಲ್ಲಿ ರನ್ಯಾ ಅವರ ತಂದೆ ಹಾಗೂ ಕರ್ನಾಟಕದ ಹಿರಿಯ ಐಪಿಎಸ್‌ ಅಧಿಕಾರಿ ಡಾ.ಕೆ.ರಾಮಚಂದ್ರರಾವ್‌ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿದೆ. ಸದ್ಯ ಕರ್ನಾಟಕ ರಾಜ್ಯ ಪೊಲೀಸ್‌ ಗೃಹ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕರಾಗಿರುವ ಡಾ.ರಾಮಚಂದ್ರರಾವ್‌ ಅವರಿಗೆ ಕರ್ನಾಟಕ ಸರ್ಕಾರದ ಗೃಹ ಇಲಾಖೆ ಕಡ್ಡಾಯ ರಜೆ ನೀಡಿದೆ. ಅವರ ಜಾಗಕ್ಕೆ ಕರ್ನಾಟಕ ಪೊಲೀಸ್‌ ನೇಮಕಾತಿ ವಿಭಾಗದ ಹೆಚ್ಚುವರಿ ಪೊಲೀಸ್‌ ಮಹಾನಿರ್ದೇಶಕರಾಗಿರುವ ಹಿರಿಯ ಐಪಿಎಸ್‌ ಅಧಿಕಾರಿ ಕೆ.ವಿ.ಶರತ್‌ಚಂದ್ರ ಅವರಿಗೆ ಕರ್ನಾಟಕ ರಾಜ್ಯ ಪೊಲೀಸ್‌ ಗೃಹ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ದಿ ನಿಗಮದ ಅಧ್ಯಕ್ಷರು ಹಾಗೂ ವ್ಯವಸ್ಥಾಪಕ ನಿರ್ದೇಶಕ ಹುದ್ದೆಯನ್ನು ಹೆಚ್ಚುವರಿಯಾಗಿ ನೀಡಲಾಗಿದೆ.

ಎರಡು ವಾರದ ಹಿಂದೆ ರನ್ಯಾರಾವ್‌ ಚಿನ್ನವನ್ನು ದುಬೈನಿಂದ...