Hubli, ಮಾರ್ಚ್ 17 -- Jain Swamiji Demand: ಜೈನ ಅಭಿವೃದ್ಧಿ ನಿಗಮ-ಮಂಡಳಿ ಸ್ಥಾಪನೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಹಲವಾರು ಬಾರಿ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು ಸ್ಪಂದಿಸುತ್ತಿಲ್ಲ. ಯಾಕೆ ಮುಖ್ಯ ಮಂತ್ರಿಸಿದ್ದರಾಮಯ್ಯ ಹಾಗೂ ಸರ್ಕಾರಕ್ಕೆ ನಮ್ಮ ಸಮುದಾಯ ಮೇಲೆ ನಿರ್ಲಕ್ಷ್ಯ ಎನ್ನುವುದು ತಿಳಿಯುತ್ತಿಲ್ಲ. ಬರುವ ಮಾರ್ಚ್‌19 ರ ಬುಧವಾರದಂದು ಬೇಡಿಕೆ ಈಡೇರಿಸಲು ಆಗ್ರಹಿಸಿ ಸರ್ಕಾರಕ್ಕೆ ಬೆಂಗಳೂರು ಚಲೋ ಮೂಲಕ ಕೊನೆಯ ಬಾರಿ ಮನವಿ ಸಲ್ಲಿಸಲಾಗುವುದು. ಇದಕ್ಕೂ ಸ್ಪಂದಿಸದಿದ್ದರೆ ಮುಂದಿನ ದಿನಗಳಲ್ಲಿ ಸಮುದಾಯದಿಂದ ಹೋರಾಟ ಮಾಡಲಾಗುವುದು ಎಂದು ಹುಬ್ಬಳ್ಳಿ ಸಮೀಪದ ಶ್ರೀ ಕ್ಷೇತ್ರ ವರೂರಿನ ರಾಷ್ಟ್ರ ಸಂತ ಗುಣಧರನಂದಿ ಮಹಾರಾಜರು ಕಣ್ಣಿರು ಹಾಕುವ ಮೂಲಕ ಘೋಷಣೆ ಮಾಡಿದರು.

ಹುಬ್ಬಳ್ಳಿ ನಗರದಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಜೈನ ಅಭಿವೃದ್ಧಿ ನಿಗಮ- ಮಂಡಳಿ ಸ್ಥಾಪನೆ ಸೇರಿದಂತೆ ಒಟ್ಟು 7 ಬೇಡಿಕೆಗಳ ಈಡೇರಿಕೆಗೆ ರಾಜ್ಯ ಸರ್ಕಾರ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿ ಭರವಸೆ ನೀಡಿತ...