ಭಾರತ, ಮಾರ್ಚ್ 15 -- ಬೆಂಗಳೂರು: ನಮ್ಮ ಮೆಟ್ರೋದಲ್ಲಿ ಟ್ರೈನ್‌ ಆಪರೇಟರ್‌ ಹುದ್ದೆಗಳಿಗೆ ಬಿಎಂಆರ್‌ಸಿಎಲ್‌ ಅರ್ಜಿ ಆಹ್ವಾನಿಸಿದೆ. ಒಟ್ಟು 50 ಹುದ್ದೆಗಳಿಗೆ 5 ವರ್ಷಗಳ ಗುತ್ತಿಗೆ ಆಧಾರದಲ್ಲಿ ಅರ್ಜಿ ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಏಪ್ರಿಲ್‌ 4ರ ಒಳಗೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಇದೇ ವೇಳೆ, ಸಹಿ ಹಾಕಿದ ಪ್ರಿಂಟ್‌ ಕಾಪಿಯನ್ನು ಏಪ್ರಿಲ್‌ 9ರ ಸಂಜೆಯ ಒಳಗೆ ಸಲ್ಲಿಸಲು ಬಿಎಂಆರ್‌ಸಿಎಲ್‌ ಪ್ರಕಟಣೆ ಹೊರಡಿಸಿದೆ. ಕನ್ನಡ ಭಾಷೆಯ ಬಗ್ಗೆ ಹೆಚ್ಚುತ್ತಿರುವ ಚರ್ಚೆ ನಡುವೆ, ಕನ್ನಡ ಓದಲು ಹಾಗೂ ಬರೆಯಲು ಬರುವ ಅಭ್ಯರ್ಥಿಗಳಿಗೆ ಆದ್ಯತೆ ನೀಡಲಾಗುತ್ತಿದೆ.

ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಮೆಟ್ರಿಕ್ಯುಲೇಷನ್ ಮತ್ತು ಎಲೆಕ್ಟ್ರಿಕಲ್ ಎಂಜಿನಿಯರಿಂಗ್ / ಎಲೆಕ್ಟ್ರಿಕಲ್ ಮತ್ತು ಎಲೆಕ್ಟ್ರಾನಿಕ್ಸ್ ಎಂಜಿನಿಯರಿಂಗ್ / ದೂರಸಂಪರ್ಕ / ಎಲೆಕ್ಟ್ರಾನಿಕ್ಸ್ ಮತ್ತು ಸಂವಹನ ಎಂಜಿನಿಯರಿಂಗ್ / ಎಲೆಕ್ಟ್ರಿಕಲ್ ಪವರ್ ಸಿಸ್ಟಮ್ಸ್ / ಇಂಡಸ್ಟ್ರಿಯಲ್ ಎಲೆಕ್ಟ್ರಾನಿಕ್ಸ್ / ಮೆಕ್ಯಾನಿಕಲ್ ಎಂಜಿನಿಯರಿಂಗ್‌ನಲ್ಲಿ ...