ಭಾರತ, ಏಪ್ರಿಲ್ 5 -- ಕಲಬುರಗಿ: ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ನೆಲೋಗಿ ಕ್ರಾಸ್ ಬಳಿ ಶನಿವಾರ ಬೆಳಗಿನ ಜಾವ ಅಪಘಾತ ಸಂಭವಿಸಿದೆ. ನಿಲ್ಲಿಸಿದ್ದ ಟ್ರಕ್‌ಗೆ ಟೆಂಪೊ ಟ್ರಾವೆಲರ್ ಡಿಕ್ಕಿ ಹೊಡೆದ ಪರಿಣಾಮ ಐದು ಜನರು ಸಾವನ್ನಪ್ಪಿದ್ದಾರೆ. ಹತ್ತು ಮಂದಿ ಗಾಯಗೊಂಡಿದ್ದಾರೆ ಎಂದು ಕಲಬುರಗಿ ಪೊಲೀಸರು ತಿಳಿಸಿದ್ದಾರೆ. ಈ ಘಟನೆಗೆ ಮುಖ್ಯ ಕಾರಣ ಚಾಲಕನ ಅಜಾಗರೂಕತೆ ಎಂದು ಹೇಳಲಾಗುತ್ತಿದೆ. ನಿಂತಿರುವ ಲಾರಿಗೆ ಡಿಕ್ಕಿ ಹೊಡೆ ಪರಿಣಾಮ 10ಕ್ಕೂ ಅಧಿಕ ಜನರಿಗೆ ಗಾಯವಾಗಿದೆ.

ಬೆಳಗಿನ ಜಾವ ಸುಮಾರು 3:30ರ ಸುಮಾರಿಗೆ ಅಪಘಾತ ಸಂಭವಿಸಿದೆ ಎಂದು ವರದಿಯಾಗಿದೆ. ಮೃತರೆಲ್ಲರೂ ಬಾಗಲಕೋಟೆ ಜಿಲ್ಲೆಯ ನಿವಾಸಿಗಳು ಎಂದು ಹೇಳಲಾಗಿದೆ. ಗಾಯಾಳುಗಳನ್ನು ತಕ್ಷಣ ವೈದ್ಯಕೀಯ ಚಿಕಿತ್ಸೆಗಾಗಿ ಕಲಬುರಗಿ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.ಕಲಬುರಗಿ ಪೊಲೀಸ್ ವರಿಷ್ಠಾಧಿಕಾರಿ ಎ. ಶ್ರೀನಿವಾಸುಲು ಅಪಘಾತದ ಸ್ಥಳಕ್ಕೆ ಭೇಟಿ ನೀಡಿ ಪ್ರಾಥಮಿಕ ತನಿಖೆ ಆರಂಭಿಸಿದ್ದಾರೆ. ನೆಲೋಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಹೆಚ್ಚಿನ ವಿವರಗಳು ಲಭ್ಯವಾಗಿಲ್ಲ...