Bangalore, ಮಾರ್ಚ್ 26 -- Kastur Gandhi Kannada Movie OTT: ಕಸ್ತೂರಬಾ ಗಾಂಧಿ ಕುರಿತಾದ ಸಿನಿಮಾವೊಂದು ಸದ್ಯದಲ್ಲಿಯೇ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ. ಬರಗೂರು ರಾಮಚಂದ್ರಪ್ಪನವರು ನಿರ್ದೇಶಿಸಿರುವ ಜನಮಿತ್ರ ಮೂವೀಸ್ ನಿರ್ಮಾಣದ 'ತಾಯಿ ಕಸ್ತೂರ್ ಗಾಂಧಿ' ಮಾರ್ಚ್ 28ರಂದು ಅಮೇಜಾನ್ ಪ್ರೈಮ್ ಒಟಿಟಿಯಲ್ಲಿ ಬಿಡುಗಡೆಯಾಗಲಿದೆ.ಬರಗೂರರ ಕಾದಂಬರಿಯನ್ನು ಆಧರಿಸಿ ಈ ಚಿತ್ರವು ನಿರ್ಮಾಣಗೊಂಡಿದೆ.

ಕಸ್ತೂರಬಾ ಗಾಂಧಿ ಅವರನ್ನೇ ಕೇಂದ್ರವಾಗಿಟ್ಟುಕೊಂಡು ನಿರ್ಮಾಣವಾದ ಮೊದಲ ಚಿತ್ರವೆಂಬ ಹೆಗ್ಗಳಿಕೆಗೂ 'ತಾಯಿ ಕಸ್ತೂರ್ ಗಾಂಧಿ' ಪಾತ್ರವಾಗಿದೆ. ಕಸ್ತೂರ್ ಬಾ ಅವರ ಬದುಕಿನ ಕೆಲವು ಪ್ರಮುಖ ಘಟನೆಗಳ ಮೂಲಕ ಆದರ್ಶ ಮತ್ತು ಕಟುವಾಸ್ತವಗಳ ಕಥನವನ್ನು ಈ ಚಿತ್ರದಲ್ಲಿ ಕಟ್ಟಿಕೊಡಲಾಗಿದೆ ಎಂದು ಪತ್ರಿಕಾ ಪ್ರಕಟಣೆಯಲ್ಲಿ ಚಿತ್ರತಂಡ ತಿಳಿಸಿದೆ.

ಬದುಕಿನ ದ್ವಂದ್ವಗಳನ್ನು ಎದುರಿಸುತ್ತಲೇ ಅದನ್ನು ಮೀರುವ ವ್ಯಕ್ತಿತ್ವಗಳಾಗಿ ಕಸ್ತೂರ್ ಬಾ ಮತ್ತು ಗಾಂಧಿಜಿಯವರನ್ನು ಚಿತ್ರಿಸಲಾಗಿದೆ. ಕಸ್ತೂರ್ ಬಾ ಅವರು ತಾಯಿ, ಪತ್ನಿ ಮತ್ತು ಹೋರಾಟಗಾರ್ತಿಯಾ...