Benagluru, ಮಾರ್ಚ್ 14 -- ಎನ್ ಎಂ ಕೆ ಸಿನಿಮಾಸ್ ಬ್ಯಾನರ್‌ನಲ್ಲಿ ಎನ್ ಎಂ ಕಾಂತರಾಜ್ ನಿರ್ಮಿಸಿರುವ ಫಾರೆಸ್ಟ್‌ ಚಿತ್ರವನ್ನು ಚಂದ್ರಮೋಹನ್ ನಿರ್ದೇಶಿಸಿದ್ದಾರೆ. ಜನವರಿ 24ರಂದು ಈ ಸಿನಿಮಾ ಚಿತ್ರಮಂದಿರಗಳಲ್ಲಿ ಬಿಡುಗಡೆ ಆಗಿತ್ತು. ಇದೀಗ ಒಟಿಟಿಗೆ ಆಗಮಿಸಿದೆ.

ಫಾರೆಸ್ಟ್‌ ಸಿನಿಮಾ ಕಾಡನ್ನು ಬೆಳೆಸುವ ಅಥವಾ ಉಳಿಸುವ ಕಥೆಯಲ್ಲ. ಕಾಡಿನಲ್ಲಿರುವುದನ್ನು ಹುಡುಕುವ ಕಥೆ. ಹಳ್ಳಿಯಿಂದ ಕಾಡಿಗೆ ಹೋಗುವ ಅಮಾಯಕರು ಏನೆಲ್ಲ ಸಮಸ್ಯೆಯನ್ನು ಎದುರಿಸುತ್ತಾರೆ ಎಂಬುದು ಈ ಚಿತ್ರದಲ್ಲಿದೆ.

ಸತ್ಯಶೌರ್ಯ ಸಾಗರ್ ಹಾಗೂ ಚಂದ್ರಮೋಹನ್ ಈ ಚಿತ್ರಕ್ಕೆ ಕಥೆ, ಚಿತ್ರಕಥೆ ರಚಿಸಿದ್ದಾರೆ. ಸತ್ಯಶೌರ್ಯ ಸಾಗರ್ ಅವರೇ ಸಂಭಾಷಣೆ ಬರೆದಿದ್ದಾರೆ. ಧರ್ಮವಿಶ್ ಸಂಗೀತ ನಿರ್ದೇಶನ, ಆನಂದ್‌ ರಾಜಾ ವಿಕ್ರಮ್ ಅವರ ಹಿನ್ನೆಲೆ ಸಂಗೀತ, ರವಿಕುಮಾರ್ ಅವರ ಛಾಯಾಗ್ರಹಣ, ಅರ್ಜುನ್ ಕಿಟ್ಟು ಸಂಕಲನ ಚಿತ್ರಕ್ಕಿದೆ.

ಚಿಕ್ಕಣ್ಣ, ಅನೀಶ್ ತೇಜೇಶ್ವರ್, ಗುರುನಂದನ್, ರಂಗಾಯಣ ರಘು ಪ್ರಮುಖಪಾತ್ರದಲ್ಲಿ ನಟಿಸಿರುವ ಫಾರೆಸ್ಟ್ ಚಿತ್ರದಲ್ಲಿ ಶರಣ್ಯ ಶೆಟ್ಟಿ, ಅರ್ಚನಾ ಕೊಟ್ಟ...