ಭಾರತ, ಏಪ್ರಿಲ್ 15 -- Kannada Sahitya Sammelana 2025: ಬಳ್ಳಾರಿಯಲ್ಲಿ 67 ವರ್ಷಗಳ ಬಳಿಕ ಬಳ್ಳಾರಿಯಲ್ಲಿ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನ ನಡೆಯಲಿದೆ. ಹವಾಮಾನವನ್ನು ದೃಷ್ಟಿಯಲ್ಲಿಟ್ಟುಕೊಂಡು 88ನೇ ಅಖಿಲ ಭಾರತ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಡಿಸೆಂಬರ್​​ನಲ್ಲಿ ಆಯೋಜಿಸಲು ತೀರ್ಮಾನಿಸಲಾಗಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ರಾಜ್ಯ ಅಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ಹೇಳಿದರು.

ಬಳ್ಳಾರಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ಡಾ ಮಹೇಶ್ ಜೋಶಿ, ಜಿಲ್ಲೆಯಲ್ಲಿ ಈವರೆಗೆ ನಾಲ್ಕು ಬಾರಿ ಸಾಹಿತ್ಯ ಸಮ್ಮೇಳನ ನಡೆದಿದೆ. ಹೊಸಪೇಟೆಯಲ್ಲಿ 1920ರಲ್ಲಿ 6ನೇ ಸಾಹಿತ್ಯ ಸಮ್ಮೇಳನ, 1926 ರಲ್ಲಿ 12ನೇ, 1947ರಲ್ಲಿ 30ನೇ ಮತ್ತು 1958ರಲ್ಲಿ 50ನೇ ಸಾಹಿತ್ಯ ಸಮ್ಮೇಳನ ಆಯೋಜನೆ ಮಾಡಲಾಗಿತ್ತು. ಇದೀಗ ಸುದೀರ್ಘ 67 ವರ್ಷದ ಬಳಿಕ 88ನೇ ಸಾಹಿತ್ಯ ಸಮ್ಮೇಳನ ಬಳ್ಳಾರಿಯಲ್ಲಿ ಆಯೋಜನೆ ಮಾಡಲಾಗಿದೆ. ಬಳ್ಳಾರಿ ಕನ್ನಡದ ಅಸ್ಮಿತೆ ತೋರಿದ ಜಿಲ್ಲೆಯಾಗಿದೆ. ಸಾಂಸ್ಕೃತಿಕವಾಗಿ ಬಳ್ಳಾರಿ ಮತ್ತು ವಿಜಯನಗರ ಎರಡೂ ಒಂದೇ ಜಿಲ್ಲೆ ಎಂದು ಹೇಳಿದರ...