ಭಾರತ, ಏಪ್ರಿಲ್ 9 -- Kannappa new release date: ವಿಷ್ಣು ಮಂಚು ಅಭಿನಯದ ಬಹುನಿರೀಕ್ಷಿತ ಪೌರಾಣಿಕ ಡ್ರಾಮಾ ಕಣ್ಣಪ್ಪ ಸಿನಿಮಾವು ಇದೇ ಏಪ್ರಿಲ್‌ ತಿಂಗಳಲ್ಲಿ ಬಿಡುಗಡೆಯಾಗಬೇಕಿತ್ತು. ಇದೀಗ ಈ ಚಿತ್ರದ ಬಿಡುಗಡೆ ದಿನಾಂಕವನ್ನೂ ಮುಂದೂಡಲಾಗಿದೆ. ಚಿತ್ರತಂಡವು ಹೊಸ ಬಿಡುಗಡೆಯ ದಿನಾಂಕವನ್ನು ನಿಗದಿಪಡಿಸಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರನ್ನು ಭೇಟಿಯಾದ ಸಮಯದಲ್ಲಿ ಚಿತ್ರದ ತಯಾರಕರು ಹೊಸ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದ್ದಾರೆ ಎಂದು ಸಿನಿಮಾ ವ್ಯಾಪಾರ ವಿಶ್ಲೇಷಕ ತರಣ್ ಆದರ್ಶ್ ಹೇಳಿದ್ದಾರೆ.

ತರಣ್ ಆದರ್ಶ್ ಬುಧವಾರ ಎಕ್ಸ್‌ನಲ್ಲಿ ಹೀಗೆ ಪೋಸ್ಟ್‌ ಮಾಡಿದ್ದಾರೆ. "ವಿಷ್ಣು ಮಂಚು ಅವರ ಪ್ಯಾನ್-ಇಂಡಿಯಾ ಚಿತ್ರ 'ಕಣ್ಣಪ್ಪ' ಹೊಸ ಬಿಡುಗಡೆಯ ದಿನಾಂಕ ಲಾಕ್‌ ಮಾಡಿದೆ. 27 ಜೂನ್ 2025ರಂದು ಈ ಸಿನಿಮಾ ಬಿಡುಗಡೆಯಾಗಲಿದೆ. ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಜತೆಗಿನ ವಿಶೇಷ ಸಭೆಯಲ್ಲಿ ಸಿನಿಮಾ ತಯಾರಕರು ಹೊಸ ಬಿಡುಗಡೆಯ ದಿನಾಂಕವನ್ನು ಅಧಿಕೃತವಾಗಿ ಘೋಷಿಸಿದ್ದಾರೆ. ಕನ್ನಪ್ಪ ಸಿನಿ...