Bengaluru, ಫೆಬ್ರವರಿ 28 -- Kapati Trailer: ಸ್ಯಾಂಡಲ್‌ವುಡ್‌ನಲ್ಲಿ ತಮ್ಮ ಸಿನಿಮಾಗಳ ಮೂಲಕ ಒಂದಷ್ಟು ಪ್ರಯೋಗಕ್ಕೆ ಒಡ್ಡಿಕೊಳ್ಳುವವರು ನಿರ್ದೇಶಕ ಮತ್ತು ನಿರ್ಮಾಪಕ ದಯಾಳ್‌ ಪದ್ಮನಾಭನ್.‌ ಹಗ್ಗದ ಕೊನೆ, ಆ ಕರಾಳ ರಾತ್ರಿ ಸಿನಿಮಾ ಮೂಲಕ ಯಶಸ್ಸು ಪಡೆದವರು. ಇದೀಗ ಇದೇ ಪದ್ಮನಾಭನ್‌, ತಮ್ಮದೇ ಡಿ ಪಿಕ್ಚರ್ಸ್‌ ಬ್ಯಾನರ್‌ ಅಡಿಯಲ್ಲಿ "ಕಪಟಿ" ಹೆಸರಿನ ಸಿನಿಮಾ ನಿರ್ಮಾಣ ಮಾಡಿದ್ದಾರೆ. ಇತ್ತೀಚೆಗಷ್ಟೇ ಈ ಚಿತ್ರದ ಟ್ರೇಲರ್‌ ಬಿಡುಗಡೆ ಆಗಿದ್ದು, ಟ್ರೇಲರ್‌ ಜತೆಗೆ ಸಿನಿಮಾ ಬಿಡುಗಡೆ ದಿನಾಂಕವನ್ನೂ ಘೋಷಣೆ ಮಾಡಿದ್ದಾರೆ.

ಸೈಕಲಾಜಿಕಲ್ ಥ್ರಿಲ್ಲರ್ ಕಥಾಹಂದರ ಹೊಂದಿರುವ "ಕಪಟಿ" ಚಿತ್ರದ ಟ್ರೇಲರ್ ಅನ್ನು ನಿರ್ಮಾಪಕರಾದ ಕೆ.ಮಂಜು, ರಮೇಶ್ ಯಾದವ್ ಹಾಗೂ ಅವಿನಾಶ್ ಯು ಶೆಟ್ಟಿ ಅನಾವರಣ ಮಾಡಿ ಶುಭ ಕೋರಿದರು. ರವಿಕಿರಣ್ - ಚೇತನ್ ಎಸ್ ಪಿ ನಿರ್ದೇಶಿಸಿರುವ ಕಪಟಿ ಸಿನಿಮಾದಲ್ಲಿ ಸುಕೃತಾ ವಾಗ್ಲೆ, ದೇವ್ ದೇವಯ್ಯ, ಸಾತ್ವಿಕ್ ಕೃಷ್ಣನ್ ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ.

ಇದನ್ನೂ ಓದಿ: ಮಾರ್ಚ್‌ನಲ್ಲಿ ಒಟಿಟಿಗೆ ಆಗಮಿಸಲಿರುವ ಟಾ...