ಭಾರತ, ನವೆಂಬರ್ 28 -- ಬೆಂಗಳೂರು: ಸಣ್ಣಪುಟ್ಟ ಸಂಚಾರ ನಿಯಮ ಉಲ್ಲಂಘನೆಗೆ ದೊಡ್ಡ ಮೊತ್ತದ ದಂಡ ವಿಧಿಸಲಾಗುತ್ತಿದ್ದು, ಇದನ್ನು ಕಟ್ಟಲು ಸಾಧ್ಯವಾಗದ ಬಡ-ಮಧ್ಯಮ ವರ್ಗದ ವಾಹನ ಸವಾರರಿಗೆ ಅಗತ್ಯ ದಾಖಲೆಗಳನ್ನು ನೀಡದಿರಲು ರಾಜ್ಯ ಬಿಜೆಪಿ ಸರ್ಕಾರ ಮುಂದಾಗಿರುವುದು ಅತ್ಯಂತ ಅಮಾನವೀಯ ಎಂದು ಆಮ್‌ ಆದ್ಮಿ ಪಾರ್ಟಿಯ ರಾಜ್ಯ ಮಾಧ್ಯಮ ಸಂಚಾಲಕ ಜಗದೀಶ್‌ ವಿ ಸದಂ ಹೇಳಿದ್ದಾರೆ.

ನಗರದಲ್ಲಿಂದು ಮಾಧ್ಯಮಗಳಿಗೆ ಹೇಳಿಕೆ ನೀಡಿದ ಜಗದೀಶ್‌ ವಿ ಸದಂ, ದಂಡ ಕಟ್ಟಲು ಸಾಧ್ಯವಾಗದೇ ಬಾಕಿ ಉಳಿಸಿಕೊಂಡಿರುವ ವಾಹನ ಸವಾರರಿಗೆ ವಿಮಾ ಪಾಲಿಸಿ ನವೀಕರಣ, ರಸ್ತೆ ತೆರಿಗೆ ಪಾವತಿ ರಸೀದಿ ಹಾಗೂ ವಾಹನ ಕ್ಷಮತೆ ಪ್ರಮಾಣಪತ್ರ ನೀಡದಿರಲು ರಾಜ್ಯ ಸರ್ಕಾರ ನಿರ್ಧರಿಸಿದೆ. ವಾಹನ ಸವಾರರಿಗೆ ಗುಂಡಿಗಳಿಲ್ಲದ ಗುಣಮಟ್ಟದ ರಸ್ತೆ ನಿರ್ಮಿಸಿಕೊಡಲೂ ಸಾಧ್ಯವಾಗದ ರಾಜ್ಯ ಸರ್ಕಾರವು ದಂಡ ವಸೂಲಿಗೆ ಮಾತ್ರ ಕಠಿಣ ನಿಲುವು ತೆಗೆದುಕೊಳ್ಳುವುದು ಸರಿಯಲ್ಲ. ಬೆಂಗಳೂರಿನ ಬಹುತೇಕ ವಾಹನ ಸವಾರರ ಮೇಲೆ ಕನಿಷ್ಠ 2,000 ರೂಪಾಯಿಯಿಂದ 40,000 ರೂಪಾಯಿ ತನಕ ದಂಡವಿದೆ. ಇದರಲ್ಲಿ ಹೆಚ್...