Delhi, ಏಪ್ರಿಲ್ 4 -- Karnataka Airports: ಕರ್ನಾಟಕದ ಎರಡನೇ ಹಂತದ ನಗರಗಳಾದ ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಪ್ರಗತಿಗೆ ಸಂಬಂಧಿಸಿದಂತೆ ಕರ್ನಾಟಕದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ವಿಮಾನ ಯಾನ ಸಚಿವರಾದ ಕಿಂಜರಾಪು ರಾಮಮೋಹನ ನಾಯ್ಡು ಚರ್ಚಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೆಹಲಿಯಲ್ಲಿ ಶುಕ್ರವಾರ ನಾಗರಿಕ ಕೇಂದ್ರ ವಿಮಾನ ಯಾನ ಸಚಿವ ಅವರನ್ನು ಭೇಟಿ ಮಾಡಿ ಮೈಸೂರು, ಕಲಬುರಗಿ, ವಿಜಯಪುರ ವಿಮಾನ ನಿಲ್ದಾಣಗಳ ಅಭಿವೃದ್ಧಿಗೆ ಹೆಚ್ಚಿನ ಅನುದಾನ, ಒತ್ತು ನೀಡುವ ಕೋರಿಕೆ ಸಲ್ಲಿಸಿದರು. ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್, ರಾಜಕೀಯ ಕಾರ್ಯದರ್ಶಿ ಗೋವಿಂದರಾಜು, ಕಾನೂನು ಸಲಹೆಗಾರ ಪೊನ್ನಣ್ಣ, ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್, ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಹಾಜರಿದ್ದರು.

ಮೈಸೂರು ವಿಮಾನ ನಿಲ್ದಾಣದ ಅಭಿವೃದ್ಧಿಗಾಗಿ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದೊಂದಿಗೆ ರಾಜ್ಯ ಸರ್ಕಾರವು ದಿನಾಂಕ 6-10-2005 ರಂದು ಒಪ್ಪಂದ ಮಾಡಿಕೊಂಡಿದೆ. ಒಪ್ಪಂದದ ನಿಯಮ ಬಿ (2) (...