Bangalore, ಮಾರ್ಚ್ 22 -- Karnataka Bandh: ಶನಿವಾರ ನಡೆಯಲಿರುವ ಬಂದ್‌ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುನ್ನೆಚ್ಚರಿಕೆ ವಹಿಸಲಾಗಿದ್ದು ಬಿಗಿ ಬಂದೋಬಸ್ತ್ ಮಾಡಲಾಗಿದೆ.‌ ಒಂದು ವೇಳೆ ಬಲವಂತವಾಗಿ ಬಂದ್‌ ಮಾಡಿಸಲು ಮುಂದಾದರೆ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಬೆಂಗಳೂರು ನಗರ ಪೊಲೀಸ್‌ ಆಯುಕ್ತ ಬಿ.‌ದಯಾನಂದ್‌ ಅವರು ಎಚ್ಚರಿಕೆ ನೀಡಿದ್ದಾರೆ. ಬಂದ್‌ ಹಿನ್ನೆಲೆಯಲ್ಲಿ ಪೂರ್ವ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ. ಕಾನೂನು ಸುವ್ಯವಸ್ಥೆಗೆ ಧಕ್ಕೆಯಾಗದಂತೆ ನಿಗಾವಹಿಸಲಾಗುವುದು. ಬಂದ್‌ಗೆ ಕರೆ ನೀಡಿರುವ ಸಂಘಟನೆಗಳ ಮುಖಂಡರು ಮತ್ತು ಪದಾಧಿಕಾರಿಗಳ ಸಭೆ ನಡೆಸಿ, ನ್ಯಾಯಾಲಯದ ಆದೇಶದ ಬಗ್ಗೆ ಮನವರಿಕೆ ಮಾಡಿಕೊಡಲಾಗಿದೆ. ಸಾರ್ವಜನಿಕ ಆಸ್ತಿ ಪಾಸ್ತಿಗಳಿಗೆ ಹಾನಿಗಳಾದರೆ ಸಂಘಟನೆಗಳೇ ಜವಾಬ್ದಾರಿ ಎಂದು ಅವರು ತಿಳಿಸಿದ್ದಾರೆ.

ಈಗಾಗಲೇ ನಗರದ ಎಲ್ಲ ಪೊಲೀಸ್ ಅಧಿಕಾರಿ ಮತ್ತು ಸಿಬ್ಬಂದಿಗೆ ಭದ್ರತೆ ಸಂಬಂಧ ಸಲಹೆ, ಸೂಚನೆ ನೀಡಲಾಗಿದೆ. ಬಂದ್ ವೇಳೆ ಕಾನೂನು ಮತ್ತು ಸುವ್ಯವಸ್ಥೆಗೆ ಧಕ್ಕೆ ತಂದರೆಅಂತಹವರ ವಿರ...