ಭಾರತ, ಫೆಬ್ರವರಿ 28 -- Karnataka Bandh: ಬೆಳಗಾವಿ ಭಾಗದಲ್ಲಿ ಮರಾಠಿಗರ ದಬ್ಬಾಳಿಕೆಯನ್ನು ಖಂಡಿಸಿ ಮಾರ್ಚ್‌ ತಿಂಗಳಲ್ಲಿ ಹೋರಾಟ ತೀವ್ರಗೊಳಿಸುತ್ತಿರುವುದಾಗಿ ಕನ್ನಡಪರ ಸಂಘಟನೆಗಳು ಘೋಷಿಸಿದೆ. ಇಂದು (ಫೆ 28) ಬೆಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲ್‌ನಲ್ಲಿ ಕನ್ನಡ ಪರ ಸಂಘಟನೆಗಳ ನಾಯಕರು ಸಭೆ ನಡೆಸಿ ಮಾರ್ಚ್‌ 22 ರಂದು ಕರ್ನಾಟಕ ಬಂದ್‌ಗೆ ಕರೆ ನೀಡಲು ನಿರ್ಧರಿಸಿದ್ದಾರೆ. ಸಭೆಯ ಬಳಿಕ ಕನ್ನಡ ಪರ ಹೋರಾಟಗಾರ ವಾಟಾಳ್ ನಾಗಾರಾಜ್ ಅವರು ಈ ವಿಷಯವನ್ನು ಖಚಿತಪಡಿಸಿದ್ದಾರೆ.

ಬೆಳಗಾವಿಯಲ್ಲಿ ಮರಾಠಿಗರು ವಿಶೇಷವಾಗಿ ಎಂಇಎಸ್‌ ಪುಂಡರು ಕನ್ನಡಿಗರ ಮೇಲೆ ದಬ್ಬಾಳಿಕೆ ನಡೆಸುತ್ತಿರುವುದು ಮುಂದುವರಿದಿದೆ. ಇತ್ತೀಚೆಗೆ ಕರ್ನಾಟಕದ ಸಾರಿಗೆ ಸಂಸ್ಥೆ ಬಸ್ ಚಾಲಕ, ನಿರ್ವಾಹಕರ ಮೇಲೆ ಹಲ್ಲೆ ನಡೆಸಿದ ಮರಾಠಿಗರು, ಬಳಿಕ ಅವರ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಿದ್ದರು. ಇದನ್ನು ಖಂಡಿಸಿ ಕನ್ನಡ ಪರ ಸಂಘಟನೆಗಳು ಬೀದಿಗಿಳಿದಿವೆ. ಪರಿಸ್ಥಿತಿ ಉದ್ವಿಗ್ನಗೊಂಡ ಕಾರಣ ಎರಡೂ ರಾಜ್ಯಗಳ ನಡುವಿನ ಬಸ್ ಸಂಚಾರ ಮೊಟಕುಗೊಂಡಿತ್ತು. ಮಹಾರಾಷ್ಟ್ರ ಸರ್ಕಾರ...