Bengaluru, ಮಾರ್ಚ್ 20 -- Karnataka Bandh On March 22: ಕೆಎಸ್‌ಆರ್‌ಟಿಸಿ ಬಸ್ ಸಿಬ್ಬಂದಿ ಮೇಲೆ ಮರಾಠಿಗರು ಹಲ್ಲೆ ನಡೆಸಿದ್ದನ್ನು ಖಂಡಿಸಿ ಆರಂಭವಾದ ಪ್ರತಿಭಟನೆಯ ಮುಂದುವರಿದ ಭಾಗವಾಗಿ ಕನ್ನಡ ಪರ ಸಂಘಟನೆಗಳು ಮಾರ್ಚ್ 22ರಂದು ಶನಿವಾರ ಕರ್ನಾಟಕ ಬಂದ್ ನಡೆಸುವಂತೆ ಕರೆ ನೀಡಿವೆ. ಬಹುತೇಕ ಕನ್ನಡ ಪರ ಸಂಘಟನೆಗಳು ಹಾಗೂ ಇತರೆ ಸಂಘ ಸಂಸ್ಥೆಗಳು ಕರ್ನಾಟಕ ಬಂದ್‌ಗೆ ಬೆಂಬಲ ಘೋಷಿಸಿವೆ. ಕೆಲವು ಸಂಘಟನೆಗಳು ಬಂದ್‌ಗೆ ಬೆಂಬಲ ಇಲ್ಲ ಎಂದು ಸ್ಪಷ್ಟಪಡಿಸಿರುವ ಕಾರಣ ಶನಿವಾರ ಕರ್ನಾಟಕ ಬಂದ್‌ಗೆ ಬಹುತೇಕ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಬಹುದು ಎಂದು ಹೇಳಲಾಗುತ್ತಿದೆ. ಅಂದರೆ ಕೆಲವು ಕಡೆ ವಾಹನ ಸಂಚಾರ, ಅಂಗಡಿ ಮುಂಗಟ್ಟು ಬಂದ್ ಆಗಬಹುದು. ಇನ್ನು ಕೆಲವೆಡೆ ಜನಜೀವನ ಎಂದಿನಂತೆಯೇ ಸಾಗಬಹುದು. ಆದಾಗ್ಯೂ, ಶನಿವಾರ ಪ್ರಯಾಣ, ಪ್ರವಾಸ ಕೈಗೊಳ್ಳುವವರು ಕರ್ನಾಟಕ ಬಂದ್ ನಡೆಯುವಾಗ ಏನಿರಬಹುದು, ಏನಿರಲ್ಲ ಎಂಬ ಮಾಹಿತಿ ಪಡೆದುಕೊಂಡಿರುವುದು ಒಳಿತು.

ಸಾರ್ವಜನಿಕ ಸಾರಿಗೆ: ಬೆಂಗಳೂರಿನಲ್ಲಿ ಬಿಎಂಟಿಸಿ ಮತ್ತು ಕೆಎಸ್‌ಆರ್‌ಟಿಸಿ ಬಸ್ ಸಂಚಾ...