Mysuru, ಜನವರಿ 30 -- ಮೈಸೂರು: ಬಿಜೆಪಿ ಜಿಲ್ಲಾಧ್ಯಕ್ಷರ ನೇಮಕ ಪ್ರಕ್ರಿಯೆ ಕರ್ನಾಟಕದಲ್ಲಿ ನಡೆದಿದೆ. ಜಿಲ್ಲಾಧ್ಯಕ್ಷರ ಆಯ್ಕೆಗೆ ಪ್ರತ್ಯೇಕ ಚುನಾವಣೆ ಸಮಿತಿ ಇದೆ. ಉಸ್ತುವಾರಿಗಳೂ ಇದ್ದಾರೆ. ಅವರು ಆಯಾ ಜಿಲ್ಲೆಗಳಿಗೆ ಹೋಗಿ ಅಲ್ಲಿನ ಮುಖಂಡರು, ಕಾರ್ಯಕರ್ತರ ಅಭಿಪ್ರಾಯ ಆಲಿಸಿ ಅಧ್ಯಕ್ಷರನ್ನು ನೇಮಕ ಮಾಡುತ್ತಾರೆ. ಇದರಲ್ಲಿ ನನ್ನ ಪಾತ್ರವೇನೂ ಇರುವುದಿಲ್ಲ. ಹೀಗಿದ್ದರೂ ಚಿಕ್ಕಬಳ್ಳಾಪುರ ಬಿಜೆಪಿ ಜಿಲ್ಲಾಧ್ಯಕ್ಷರ ಆಯ್ಕೆ ವಿಚಾರದಲ್ಲಿ ಅಲ್ಲಿನ ಸಂಸದ ಡಾ.ಕೆ.ಸುಧಾಕರ್‌ ಅವರು ನನ್ನನ್ನು ಉಲ್ಲೇಖಿಸಿ ಟೀಕೆ ಮಾಡಿದ್ದಾರೆ. ಪಕ್ಷದ ಅಧ್ಯಕ್ಷನಾಗಿ ಟೀಕೆಗಳನ್ನು ಸಹಿಸಿಕೊಳ್ಳುತ್ತೇನೆ. ಆದರೆ ಅವರು ಕರೆ ಮಾಡಿಲ್ಲ. ಅವರ ಕರೆ ಸ್ವೀಕರಿಸದಷ್ಟು ದೊಡ್ಡವನು ನಾನಲ್ಲ. ನನ್ನ ತಂದೆಯವರ ಹೆಸರು ತಳುಕು ಹಾಕಿ ಟೀಕಿಸುವುದು ಸರಿಯಲ್ಲ

ಚಿಕ್ಕಬಳ್ಳಾಪುರ ಸಂಸದ ಡಾ.ಕೆ.ಸುಧಾಕರ್‌ ಅವರ ಟೀಕೆಗಳಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ನೀಡಿದ ಉತ್ತರವಿದು. ಮೈಸೂರು ಜಿಲ್ಲೆ ಸುತ್ತೂರಿನಲ್ಲಿ ಜಾತ್ರಾ ಮಹೋತ್ಸವದಲ್ಲಿ ಗುರುವಾರ ಭಾಗಿಯ...