Bengaluru, ಮಾರ್ಚ್ 7 -- ಉನ್ನತ ಶಿಕ್ಷಣಕ್ಕೆ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಸಿಕ್ಕ ಕೊಡುಗೆಗಳಿವು: ಸಿಎಂ ಭಾಷಣದ ಪಾಯಿಂಟ್ಸ್

ಉನ್ನತ ಶಿಕ್ಷಣಕ್ಕೆ ಈ ಬಾರಿಯ ರಾಜ್ಯ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಅವರು ಘೋಷಿಸಿರುವ ಕೊಡುಗೆಗಳ ಹೈಲೈಟ್ಸ್ ಇಲ್ಲಿದೆ.

ಉನ್ನತ ಶಿಕ್ಷಣ ಸಂಸ್ಥೆಗಳ ಸಮಗ್ರ ನಿರ್ವಹಣೆಗಾಗಿ ಜಾರಿಮಾಡಿರುವ UUCMS ತಂತ್ರಾಂಶವನ್ನು ಇನ್ನೂ ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಲು ಒಟ್ಟಾರೆ 30 ಕೋಟಿ ರೂ. ವೆಚ್ಚದಲ್ಲಿ ಉನ್ನತೀಕರಿಸಲಾಗುವುದು.KKRDB ವತಿಯಿಂದ 23,000 ವಿದ್ಯಾರ್ಥಿಗಳಿಗೆ ವಿಶೇಷ ಕೌಶಲ್ಯ ಅಭಿವೃದ್ಧಿ ಕಾರ್ಯಕ್ರಮಗಳನ್ನು 10 ಕೋಟಿ ರೂ. ವೆಚ್ಚದಲ್ಲಿ ಹಮ್ಮಿಕೊಳ್ಳಲಾಗುವುದು.

ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ. ಮನಮೋಹನ್‌ ಸಿಂಗ್‌ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು. ಈ ವಿಶ್ವವಿದ್ಯಾಲಯವನ್ನು ದೇಶದಲ್ಲಿ ಮಾದರಿಯನ್ನಾಗಿಸುವ ಉದ್ದೇಶದಿಂದ, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಆರ್‌.ಸಿ. ಕಾಲೇಜುಗಳನ್ನು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳನ್ನಾಗಿ ಅಭಿವೃ...