Puttur, ಫೆಬ್ರವರಿ 16 -- Karnataka Budget 2025: ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಗೇ ಸರಕಾರಿ ಮೆಡಿಕಲ್ ಕಾಲೇಜು ಮಂಜೂರಾಗಬೇಕು ಎಂಬುದು ಹಳೆಯ ಕನಸು. ಅದರಲ್ಲೂ ದಕ್ಷಿಣ ಕನ್ನಡ ಜಿಲ್ಲೆಯ ಮಟ್ಟಿಗೆ ಮೆಡಿಕಲ್ ಕಾಲೇಜು ಪುತ್ತೂರಿನಲ್ಲಿ ಇದ್ದರೆ ಒಳ್ಳೆಯದು ಎಂಬುದು ಕಳೆದ ಏಳೆಂಟು ವರ್ಷಗಳಿಂದ ಕೇಳಿಬರುತ್ತಿರುವ ಮಾತು. ಇದೀಗ ಆ ಹೋರಾಟಕ್ಕೆ ಬಲ ಬಂದಿದ್ದು, ತಾರ್ಕಿಕ ಅಂತ್ಯ ದೊರಕುವ ಭರವಸೆಯೂ ಸಿಕ್ಕಿದೆ. ರಾಜ್ಯ ಸರಕಾರ ಈ ಬಾರಿಯ ಬಜೆಟ್‌ನಲ್ಲಿ ಪುತ್ತೂರು ಸರಕಾರಿ ಮೆಡಿಕಲ್ ಕಾಲೇಜು ಘೋಷಣೆ ಮಾಡುವ ಕುರಿತ ಆಶಾಭಾವನೆಯನ್ನು ಸ್ಥಳೀಯ ಶಾಸಕ ಅಶೋಕ್ ಕುಮಾರ್ ರೈ ಕೋಡಿಂಬಾಡಿ ಹೊಂದಿದ್ದಾರೆ. ಇದಕ್ಕೆ ನಡೆಸಿದ ಪ್ರಯತ್ನಗಳಿಗೆ ಪೂರಕ ಸ್ಪಂದನೆಯೂ ದೊರಕಿರುವುದಾಗಿ ಅವರು ತಿಳಿಸಿದ್ದಾರೆ.

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಈಗಾಗಲೇ ಎಂಟು ಮೆಡಿಕಲ್ ಕಾಲೇಜುಗಳಿವೆ, ಆದರೆ ಸರಕಾರಿ ಮೆಡಿಕಲ್ ಕಾಲೇಜು ಇದ್ದರೆ, ಆರ್ಥಿಕವಾಗಿ ಹಿಂದುಳಿದ ಪ್ರತಿಭಾವಂತರಿಗೆ ಇದರಿಂದ ಅನುಕೂಲವಾಗಲಿದೆ. ಅಲ್ಲದೆ, ಖಾಸಗಿ ಮೆಡಿಕಲ್ ಕಾಲೇಜುಗಳಲ್ಲಿ ಮೆರಿಟ್ ಸೀಟು ...