ಭಾರತ, ಮಾರ್ಚ್ 7 -- Karnataka Budget 2025: ಕರ್ನಾಟಕದಲ್ಲಿ ಮಿತಿ ಮೀರಿರುವ ಮಾನವ ವನ್ಯಜೀವಿ ಸಂಘರ್ಷದಿಂದ ಜನ ಜೀವ ಕಳೆದುಕೊಳ್ಳುತ್ತಿದ್ದಾರೆ. ಹಾಸನ, ಕೊಡಗು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಆನೆಗಳ ದಾಳಿಯಿಂದ ಜೀವ ಕಳೆದುಕೊಂಡು ಅರಣ್ಯ ಇಲಾಖೆ ವಿರುದ್ದ ಆಕ್ರೋಶ ಹೊರ ಹಾಕುತ್ತಿದ್ದಾರೆ. ಇದರ ನಡುವೆಯೇ ಸಿಎಂ ಸಿದ್ದರಾಮಯ್ಯ ಅವರು ತಾವು ಮಂಡಿಸಿದ 2025ನೇ ಸಾಲಿನ ಬಜೆಟ್‌ನಲ್ಲಿ ವನ್ಯ ಪ್ರಾಣಿಗಳ ದಾಳಿಯಿಂದ ಉಂಟಾಗುವ ಮಾನವ ಪ್ರಾಣ ಹಾನಿ ಪ್ರಕರಣಗಳಲ್ಲಿ ನೀಡಲಾಗುತ್ತಿರುವ ದಯಾತ್ಮಕ ಧನವನ್ನು 15 ಲಕ್ಷ ರೂ.ಗಳಿಂದ 20 ಲಕ್ಷ ರೂ.ಗಳಿಗೆ ಹೆಚ್ಚಿಸಲಾಗುವುದು ಎಂದು ಪ್ರಕಟಿಸಿದ್ದಾರೆ. ಈ ಮೂಲಕ ವನ್ಯಜೀವಿಗಳ ದಾಳಿಯಿಂದ ಪ್ರಾಣ ಕಳೆದುಕೊಳ್ಳುತ್ತಿರುವವರ ಕುಟುಂಬಗಳ ನೆರವಿಗೆ ನಿಂತಿದ್ದಾರೆ. ಕೆಲ ವರ್ಷದಿಂದ ವನ್ಯಜೀವಿಗಳ ದಾಳಿಗೆ ಮೃತಪಟ್ಟವರ ಕುಟುಂಬಗಳಿಗೆ ನೀಡುತ್ತಿದ್ದ ನೆರವಿನ ಪ್ರಮಾಣವನ್ನು ಏರಿಸಲಾಗಿದೆ.

ಕರ್ನಾಟಕದಲ್ಲಿ ಹುಲಿ, ಆನೆ, ಚಿರತೆ, ಕಾಡೆಮ್ಮೆ, ಕರಡಿ, ಮೊಸಳೆ ಸಹಿತ ವನ್ಯಜೀವಿಗಳ ದಾಳಿಯಿಂದ ಮೃತಪಟ್ಟವರಿಗೆ ಮೊದಲ...