Bangalore, ಮಾರ್ಚ್ 7 -- ಆಧುನಿಕ ತಂತ್ರಜ್ಞಾನದ ಭಾಗವಾಗಿ ಎಐ ತಂತ್ರಜ್ಞಾನದ ಮೂಲಕ ರಾಜ್ಯದ ನ್ಯಾಯಾಲಯಗಳ ಕಾರ್ಯ ಕಲಾಪಗಳ ಪ್ರತಿಲೇಖನ, ನ್ಯಾಯಾಂಗ ದಾಖಲೆಗಳ ಅನುವಾದ ಮತ್ತಿತರ ಮಾಹಿತಿಯನ್ನು ಪಡೆಯಲು ಎರಡು ಕೋಟಿ ರೂ. ವೆಚ್ಚದಲ್ಲಿ ಸ್ಮಾರ್ಟ್‌ ವ್ಯವಸ್ಥೆಯನ್ನು ಅನುಷ್ಠಾನಗೊಳಿಸಲು ಉದ್ದೇಶಿಸಿದೆ.

ಕರ್ನಾಟಕ ಉಚ್ಛ ನ್ಯಾಯಾಲಯ ಮತ್ತು ಜಿಲ್ಲಾ ನ್ಯಾಯಾಲಯಗಳಲ್ಲಿನ ಗ್ರಂಥಾಲಯಗಳನ್ನು ಮೇಲ್ದರ್ಜೆಗೇರಿಸಲು ಮತ್ತು ಡಿಜಿಟಲ್ ಗ್ರಂಥಾಲಯಗಳನ್ನು ಪ್ರಾರಂಭಿಸಲು ಈ ಆರ್ಥಿಕ ವರ್ಷದಲ್ಲಿ ಎರಡು ಕೋಟಿ ರೂ. ಹಂಚಿಕೆ ಮಾಡಲಾಗಿದೆ.

ಬಾರ್ ಅಸೋಸಿಯೇಷನ್ ಸದಸ್ಯರಿಗೆ ಚಂದಾದಾರಿಕೆಯೊಂದಿಗೆ ಕಾಯಿದೆ/ ನಿಯಮಗಳು / ಕಾನೂನು ಪುಸ್ತಕಗಳು ಸುಲಭವಾಗಿ ದೊರಕುವಂತೆ ಮಾಡಲು ಅಡ್ವೊಕೇಟ್ ಜನರಲ್ ಕಛೇರಿ ಸಹಯೋಗದೊಂದಿಗೆ ಆನ್‌ಲೈನ್‌ ಗ್ರಂಥಾಲಯವನ್ನು 50 ಲಕ್ಷ ರೂ. ವೆಚ್ಚದಲ್ಲಿ ಸ್ಥಾಪಿಸಲಾಗುವುದು.

ಕೃಷ್ಣಾ ಮೇಲ್ದಂಡೆ ಯೋಜನೆಯಡಿ ಭೂಸ್ವಾಧೀನ ಕುರಿತಂತೆ ನ್ಯಾಯಾಲಯಗಳಲ್ಲಿ ದಾಖಲಿಸಿರುವ ಪ್ರಕರಣಗಳನ್ನು ಶೀಘ್ರವಾಗಿ ವಿಲೇವಾರಿ ಮಾಡಿ ಸೂಕ್ತ ಪರಿಹಾರ ಒದಗಿಸು...