Bangalore, ಮಾರ್ಚ್ 7 -- Karnataka Budget 2025: ಕರ್ನಾಟಕವು ಎರಡು ವರ್ಷದ ಹಿಂದೆ ವಿಧಾನಸಭೆ ಚುನಾವಣೆ ವೇಳೆ ನೀಡಿದ ಪಂಚ ಗ್ಯಾರಂಟಿಗಳು, ಬಹುಮತದೊಂದಿಗೆ ಸರ್ಕಾರ ರಚನೆಯಾದ ನಂತರ ಘೋಷಿಸಿದ ಐದು ಕಾರ್ಯಕ್ರಮಗಳು, ಆರು ತಿಂಗಳ ಅಂತರದಲ್ಲಿ ಜಾರಿಗೊಳಿಸಿದ ಪಂಚ ಗ್ಯಾರಂಟಿಗಳೂ ಈ ಆರ್ಥಿಕ ವರ್ಷದಲ್ಲೂ ಮುಂದುವರಿಯಲಿವೆ. ಹಿಂದಿನ ಎರಡು ಬಜೆಟ್‌ಗಳಲ್ಲಿ ಸಿಎಂ ಸಿದ್ದರಾಮಯ್ಯ ಅವರು ಸುಮಾರು 52 ಸಾವಿರ ಕೋಟಿ ರೂ.ಗಳನ್ನು ಗೃಹಲಕ್ಷ್ಮಿ, ಗೃಹಜ್ಯೋತಿ, ಶಕ್ತಿ, ಅನ್ನಭಾಗ್ಯ ಹಾಗೂ ಯುವನಿಧಿ ಯೋಜನೆಗಳಿಗೆ ಒದಗಿಸಿತ್ತು. ಈ ಬಾರಿ ಬಜೆಟ್‌ನಲ್ಲಿ ಪಂಚ ಗ್ಯಾರಂಟಿಗಳ ಸ್ಥಿತಿ ಏನಾಗಬಹುದೋ ಎನ್ನುವ ಚರ್ಚೆಗಳಿದ್ದವು. ಈಗಾಗಲೇ ಗೃಹಲಕ್ಷ್ಮಿ ಯೋಜನೆಯ ಬಾಕಿ ನಾಲ್ಕು ತಿಂಗಳಿನಿಂದ ಬಂದಿಲ್ಲ ಎನ್ನುವ ವಿಚಾರದ ನಡುವೆ ಈ ಬಜೆಟ್‌ನಲ್ಲಿ ಗೊಂದಲಗಳಿಗೆ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ. 51,034 ಕೋಟಿ ರೂ.ಗಳನ್ನು ಆಯವ್ಯಯದಲ್ಲಿ ಮೀಸಲಿಡಲಾಗಿದೆ. ಐದು ಯೋಜನೆಗಳಿಗೆ ಬೇಡಿಕೆಗೆ ಅನುಗುಣವಾಗಿ ಆರ್ಥಿಕ ನೆರವು ಒದಗಿಸಲಾಗುತ್ತದೆ. ಈ ಮೂಲಕ ಯೋಜನೆಗಳು ಸ್ಥ...