Bengaluru, ಮಾರ್ಚ್ 7 -- ರಾಜ್ಯ ಬಜೆಟ್‌ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಸಿಕ್ಕಿರುವುದೇನು? ಇಲ್ಲಿದೆ ನೋಡಿ ಸಿಎಂ ಸಿದ್ದರಾಮಯ್ಯ ಬಜೆಟ್ ಹೈಲೈಟ್ಸ್‌

LKG ಯಿಂದ ದ್ವಿತೀಯ ಪಿ.ಯು.ಸಿ ವರೆಗಿನ ಎಲ್ಲಾ ತರಗತಿಗಳ ವಿದ್ಯಾರ್ಥಿಗಳು, ಆಯಾ ತರಗತಿಗೆ ತಕ್ಕಂತೆ ಕಲಿಕೆಯ ಮಟ್ಟವನ್ನು ಹೊಂದುವ ನಿಟ್ಟಿನಲ್ಲಿ ಮೂರು ವರ್ಷಗಳ ಮಹತ್ವಾಕಾಂಕ್ಷಿ ಕಾರ್ಯಕ್ರಮವನ್ನು ಜಾರಿಗೊಳಿಸಲಾಗುವುದು. ಈ ಮೂಲಕ SSLC ಮತ್ತು PUC ಪರೀಕ್ಷೆಗಳ ಫಲಿತಾಂಶದಲ್ಲಿ ಸುಧಾರಣೆ ತರಲಾಗುವುದು. ಇದಕ್ಕಾಗಿ, ಈ ಕೆಳಕಂಡ ಉಪಕ್ರಮಗಳನ್ನು ಕೈಗೊಳ್ಳಲಾಗುವುದು.

ಪ್ರಸ್ತುತ 2,619 ಸರ್ಕಾರಿ ಶಾಲೆಗಳ ಪೂರ್ವ ಪ್ರಾಥಮಿಕ ತರಗತಿಗಳಿಗೆ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಗಿದ್ದು,ಒಟ್ಟು 90,195 ವಿದ್ಯಾರ್ಥಿಗಳು ದಾಖಲಾಗಿರುತ್ತಾರೆ. ಈ ಯೋಜನೆಯನ್ನು 70 ಕೋಟಿ ರೂ. ವೆಚ್ಚದಲ್ಲಿ ಒಟ್ಟಾರೆ 5,000 ಶಾಲೆಗಳಿಗೆ ವಿಸ್ತರಿಸಲಾಗುವುದು.

ʻಕಲಿಕಾ ಚಿಲುಮೆʼ ಕಾರ್ಯಕ್ರಮದಡಿ ಒಂದರಿಂದ ಐದನೇ ತರಗತಿವರೆಗಿನ ವಿದ್ಯಾರ್ಥಿಗಳಿಗೆ ಸಂತಸದಾಯಕ ಕಲಿಕಾ ಅನುಭವ ಒದಗಿಸುವುದು.

ಸರ್ಕಾರಿ ಶಾಲೆಗಳಲ್ಲ...