Bangalore, ಮಾರ್ಚ್ 7 -- Karnataka Budget 2025: ಕರ್ನಾಟಕ ಬಜೆಟ್‌ ಮಂಡನೆ ವೇಳೆ ಕರ್ನಾಟಕದ ನಾನಾ ಭಾಗಗಳ ಲಿಂಗಾಯತ ಸ್ವಾಮೀಜಿಗಳ ನಿಯೋಗ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬಸವಕಲ್ಯಾಣದಲ್ಲಿ 'ವಚನ ವಿಶ್ವವಿದ್ಯಾಲಯ' ಮತ್ತು ಸಂಶೋಧನ ಕೇಂದ್ರ ಆರಂಭಿಸಬೇಕು. ಬೆಂಗಳೂರಿನಲ್ಲಿ ಅಕ್ಷರಧಾಮದ ಮಾದರಿಯಲ್ಲಿ ಬೃಹತ್ 'ಶರಣ ದರ್ಶನ' ಕೇಂದ್ರ ಸ್ಥಾಪಿಸುವ ಬೇಡಿಕೆ ಸಲ್ಲಿಸಿತ್ತು. ಇದಕ್ಕೆ ಪೂರಕವಾಗಿಯೇ ಸ್ಪಂದಿಸಿರುವ ಸಿಎಂ ಸಿದ್ದರಾಮಯ್ಯ ಅವರು ಶುಕ್ರವಾರ ಮಂಡಿಸಿದ 2025ನೇ ಸಾಲಿನ ಬಜೆಟ್‌ನಲ್ಲಿಅಂತಾರಾಷ್ಟ್ರೀಯ ಬಸವ ಆಧ್ಯಾತ್ಮಿಕ ಹಾಗೂ ವಚನ ಅಧ್ಯಯನ ಕೇಂದ್ರವನ್ನು ಬೆಂಗಳೂರಿನಲ್ಲಿ ಸ್ಥಾಪನೆ ಮಾಡಲು ತಾತ್ವಿಕ ಅನುಮೋದನೆ ನೀಡಲಾಗಿದೆ.

ಬೆಂಗಳೂರಿನಲ್ಲಿ ಸ್ಥಾಪನೆ ಮಾಡಲಿರುವ ಅಂತಾರಾಷ್ಟ್ರೀಯ ಬಸವ ಆಧ್ಯಾತ್ಮಿಕ ಹಾಗೂ ವಚನ ಅಧ್ಯಯನ ಕೇಂದ್ರರೂಪಿಸುವ ಬಗ್ಗೆ ತಜ್ಞರ ಸಮಿತಿಯನ್ನು ರಚಿಸಿ ವಿಸ್ತೃತ ವರದಿ ಪಡೆದು ಕ್ರಮ ಕೈಗೊಳ್ಳಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದ್ದಾರೆ.

ಇದಲ್ಲದೇ ಬೀದರ್‌ ಜಿಲ್ಲೆ ಬಸವಕಲ್ಯಾಣ ಅಭಿವೃದ್ಧಿ...