Bangalore, ಮಾರ್ಚ್ 7 -- ಬೆಂಗಳೂರು ನಗರ ವಿಶ್ವವಿದ್ಯಾಲಯವನ್ನು ಡಾ. ಮನಮೋಹನ್‌ ಸಿಂಗ್‌ ಬೆಂಗಳೂರು ನಗರ ವಿಶ್ವವಿದ್ಯಾಲಯ ಎಂದು ಮರುನಾಮಕರಣ ಮಾಡಲಾಗುವುದು. ಈ ವಿಶ್ವವಿದ್ಯಾಲಯವನ್ನು ದೇಶದಲ್ಲಿ ಮಾದರಿಯನ್ನಾಗಿಸುವ ಉದ್ದೇಶದಿಂದ, ಸರ್ಕಾರಿ ಕಲಾ ಕಾಲೇಜು ಹಾಗೂ ಸರ್ಕಾರಿ ಆರ್‌.ಸಿ. ಕಾಲೇಜುಗಳನ್ನು ವಿಶ್ವವಿದ್ಯಾಲಯದ ಘಟಕ ಕಾಲೇಜುಗಳನ್ನಾಗಿ ಅಭಿವೃದ್ಧಿಪಡಿಸಲಾಗುವುದು.

ರಾಷ್ಟ್ರಕವಿ ಡಾ. ಜಿ.ಎಸ್. ಶಿವರುದ್ರಪ್ಪ ಟ್ರಸ್ಟ್‌ನ ಕಾರ್ಯಚಟುವಟಿಕೆಗಳನ್ನು ಕೈಗೊಳ್ಳಲು, ಬೆಂಗಳೂರಿನಲ್ಲಿ ಸುಸಜ್ಜಿತ ಕಟ್ಟಡ ನಿರ್ಮಾಣ ಮಾಡಲು ಒಂದು ಕೋಟಿ ರೂ. ಅನುದಾನ ಒದಗಿಸಲಾಗುವುದು.

ಶಿಕ್ಷಣ ತಜ್ಞ, ಪದ್ಮಭೂಷಣ ಡಾ.ಹೆಚ್‌.ನರಸಿಂಹಯ್ಯನವರ ಸ್ಮರಣಾರ್ಥವಾಗಿ ಡಾ.ಹೆಚ್‌.ನರಸಿಂಹಯ್ಯ ಪ್ರಾಧಿಕಾರವನ್ನು ಸ್ಥಾಪಿಸಲಾಗುವುದು. ಅವರು ವ್ಯಾಸಂಗ ಮಾಡಿದ, ಗೌರಿಬಿದನೂರಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯನ್ನು ಉನ್ನತೀಕರಿಸಲಾಗುವುದು.

ರೈತ ಸಂಘದ ಸಂಸ್ಥಾಪಕ ಹಾಗೂ ಕಾನೂನು ತಜ್ಞರಾಗಿದ್ ಪ್ರೊ.ಎಂ.ಡಿ. ನಂಜುಂಡ ಸ್ವಾಮಿ ಸಂಶೋಧನಾ ಪೀಠವನ್ನು ಮೈಸೂರು ವಿಶ್ವ...