ಭಾರತ, ಮಾರ್ಚ್ 7 -- ಬಜೆಟ್‌ ಮಂಡಿಸಲಿರುವ ಸಿಎಂ ಸಿದ್ದರಾಮಯ್ಯ ಅವರಿಗೆ ಕಾವೇರಿ ನಿವಾಸದಲ್ಲಿ ಅಧಿಕಾರಿಗಳು ಬಹೆಟ್‌ ಪ್ರತಿ ಹಸ್ತಾಂತರ ಮಾಡಿದ್ದಾರೆ.

ಸಿದ್ದರಾಮಯ್ಯ ಬಜೆಟ್‌ ಮಂಡನೆಯ ನಡುವೆ ಬಿಜೆಪಿ ಹಾಗೂ ಜೆಡಿಎಸ್‌ ಪಕ್ಷಗಳು ಜಂಟಿಯಾಗಿ ಪ್ರತಿಭಟನೆ ನಡೆಸಲು ಮುಂದಾಗಿವೆ. ಹೀಗಾಗಿ ಕಾಂಗ್ರೆಸ್‌ ‌ಸರ್ಕಾರಕ್ಕೆ ಪ್ರತಿಭಟನೆ ಬಿಸಿ ತಟ್ಟಲಿದೆ.

ಪ್ರತಿ ಶಾಸಕರ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚುವರಿಯಾಗಿ 5 ಕೋಟಿ ರೂ.ಗಳನ್ನು ನೀಡಬೇಕೆಂದು ಪ್ರತಿಪಕ್ಷಗಳು ಒತ್ತಾಯಿಸಿವೆ. ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಮೂಲಸೌಕರ್ಯ ಅಭಿವೃದ್ಧಿ, ರಸ್ತೆ ನಿರ್ಮಾಣ ಮತ್ತು ಮೂಲಸೌಕರ್ಯಕ್ಕಾಗಿ 2025-26ರ ರಾಜ್ಯ ಬಜೆಟ್‌ನಲ್ಲಿ 50 ಕೋಟಿ ರೂ.ಗಳ ಅನುದಾನವನ್ನು ನೀಡುವಂತೆ ಬಿಜೆಪಿ ಒತ್ತಾಯಿಸಿದೆ.

ಇಂದು ಸಿಎಂ ಸಿದ್ದರಾಮಯ್ಯ ಬೆಳಗ್ಗೆ 10:15ಕ್ಕೆ ಬಜೆಟ್‌ ಮಂಡನೆ ಆರಂಭಿಸಲಿದ್ದಾರೆ. ಅದಕ್ಕೂ ಮುನ್ನ ಬೆಳಗ್ಗೆ 9:45ಕ್ಕೆ ಆಯವ್ಯಯವನ್ನು ಅನುಮೋದಿಸಲು ಸಚಿವ ಸಂಪುಟದ ವಿಶೇಷ ಸಭೆ ನಡೆಸಲಿದ್ದಾರೆ. ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಈ ಸಬೆ ನ...