ಭಾರತ, ಮಾರ್ಚ್ 7 -- ಇಂದು ಸಿಎಂ ಸಿದ್ದರಾಮಯ್ಯ ಬೆಳಗ್ಗೆ 10:15ಕ್ಕೆ ಬಜೆಟ್‌ ಮಂಡನೆ ಆರಂಭಿಸಲಿದ್ದಾರೆ. ಅದಕ್ಕೂ ಮುನ್ನ ಬೆಳಗ್ಗೆ 9:45ಕ್ಕೆ ಆಯವ್ಯಯವನ್ನು ಅನುಮೋದಿಸಲು ಸಚಿವ ಸಂಪುಟದ ವಿಶೇಷ ಸಭೆ ನಡೆಸಲಿದ್ದಾರೆ. ವಿಧಾನಸೌಧದ ಸಚಿವ ಸಂಪುಟ ಸಭಾಮಂದಿರದಲ್ಲಿ ಈ ಸಬೆ ನಡೆಯಲಿದೆ. ಅಲ್ಲಿಂದ ನೇರವಾಗಿ ವಿಧಾನಸಭೆಯ ಸಭಾಂಗಣಕ್ಕೆ ತೆರಳಿ ಬಜೆಟ್‌ ಮಂಡಿಸಲಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು (ಮಾರ್ಚ್ 7) ಬೆಳಿಗ್ಗೆ 10.15ಕ್ಕೆ ಬಜೆಟ್ ಮಂಡಿಸಲಿದ್ದಾರೆ. ಬೆಳಿಗ್ಗೆ 10.30ಕ್ಕೆ ರಾಹುಕಾಲ ಶುರುವಾಗುವ ಕಾರಣ ಈ ಬಾರಿ ಮುಂಚಿತವಾಗಿ ಬಜೆಟ್ ಭಾಷಣ ಶುರುವಾಗಲಿದೆ. ವಾಡಿಕೆಯಂತಾದರೆ ಬೆಳಿಗ್ಗೆ 11 ಗಂಟೆಗೆ ಬಜೆಟ್ ಮಂಡನೆಯಾಗಬೇಕಿತ್ತು.

ಬಜೆಟ್ ಎನ್ನುವಂಥದ್ದು ಬರಿ ಹಾಳೆಗಳ ಮೇಲಿನ ಲೆಕ್ಕ ಅಲ್ಲ, ಅದು ಕರ್ನಾಟಕದ 7 ಕೋಟಿ ಕನ್ನಡಿಗರ ಭವಿಷ್ಯ ರೂಪಿಸುವ ಕೈಪಿಡಿ ಎಂಬುದು ನನ್ನ ನಂಬಿಕೆ. ರಾಜ್ಯದ ಪ್ರತಿಯೊಬ್ಬ ಪ್ರಜೆಯನ್ನು ಯಾವುದಾದರೊಂದು ಸರ್ಕಾರಿ ಯೋಜನೆಯ ಫಲಾನುಭವಿಯನ್ನಾಗಿ ಮಾಡುವಂತಹ ಪ್ರಾಮಾಣಿಕ ಪ್ರಯತ್ನವನ್ನು ಬಜೆಟ...