ಭಾರತ, ಮಾರ್ಚ್ 7 -- ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 16ನೇ ಬಜೆಟ್ ಮಂಡನೆ ಆರಂಭಿಸಿದ್ದಾರೆ. ಕಾಲುನೋವು ಹಿನ್ನೆಲೆಯಲ್ಲಿ ನಿಧಾನಕ್ಕೆ ವಿಧಾನಸೌಧದ ಒಳ ಪ್ರವೇಶಿಸಿದ ಸಿಎಂ, ನಿಂತುಕೊಂಡೇ ಆಯವ್ಯಯ ಮಂಡಿಸುತ್ತಿದ್ದಾರೆ.
ನನ್ನ ರಾಜಕೀಯ ಜೀವನದ 16ನೇ ಬಜೆಟ್ ಮಂಡನೆಗೆ ಈ ದಿನ ಸಿದ್ಧನಾಗಿದ್ದೇನೆ. ಹದಿನಾರು ಬಾರಿ ಈ ರಾಜ್ಯದ ಬಜೆಟ್ ಮಂಡನೆ ಮಾಡಲು ಅವಕಾಶ ನೀಡಿರುವ ಕರ್ನಾಟಕದ ಸಮಸ್ತ ಜನತೆಗೆ ನಾನು ಕೃತಜ್ಞ. ಬುದ್ಧ, ಬಸವ, ಗಾಂಧಿ, ಅಂಬೇಡ್ಕರರ ಆಶಯಗಳಲ್ಲಿ ನಂಬಿಕೆಯನ್ನಿಟ್ಟು, ಅದರಂತೆ ನಡೆಯುತ್ತಿರುವ ನಾವು ಈ ಬಜೆಟ್ ಮೂಲಕ ಸಮಸಮಾಜದ ಕನಸನ್ನು ನನಸಾಗಿಸುವತ್ತ ಮತ್ತಷ್ಟು ದೃಢಹೆಜ್ಜೆಯನ್ನಿಡುವ ಪ್ರಯತ್ನ ಮಾಡಿದ್ದೇವೆ. ಮುಂದಿನ ಒಂದು ವರ್ಷಗಳ ಕಾಲದ ರಾಜ್ಯದ ಸಮಗ್ರ ಅಭಿವೃದ್ಧಿಗೆ ಈ ಬಜೆಟ್ ದಾರಿದೀಪವಾಗಲಿದೆ ಎಂಬುದು ನಿಸ್ಸಂಶಯ.
ಸಿದ್ದರಾಮಯ್ಯ ಬಜೆಟ್ ಮಂಡನೆಯ ನೇರಪ್ರಸಾರ ವಿಡಿಯೋ ಇಲ್ಲಿದೆ
ಬಜೆಟ್ ಪ್ರತಿಯೊಂದಿಗೆ ಸಿಎಂ ಸಿದ್ದರಾಮಯ್ಯ ಕಾವೇರಿ ನಿವಾಸದಿಂದ ವಿಧಾನಸೌಧ ತಲುಪಿದ್ದಾರೆ. ವಿಧಾನಸೌಧದ ಒಳಗೆ ವ...
Click here to read full article from source
इस लेख के रीप्रिंट को खरीदने या इस प्रकाशन का पूरा फ़ीड प्राप्त करने के लिए, कृपया
हमे संपर्क करें.