Bangalore, ಏಪ್ರಿಲ್ 7 -- Karnataka CET 2025: ಈಗಾಗಲೇ ಪಿಯುಸಿ ಪರೀಕ್ಷೆ ಮುಗಿಸಿ ಸಿಇಟಿಗೆ ತಯಾರಾಗುತ್ತಿರುವ ವಿದ್ಯಾರ್ಥಿಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಪ್ರವೇಶ ಪತ್ರ ನೀಡುವ ಪ್ರಕ್ರಿಯೆಯನ್ನು ಆರಂಭಿಸಿದೆ. ಭಾನುವಾರದಿಂದಲೇ ಪ್ರವೇಶಪತ್ರವನ್ನು ಬಿಡುಗಡೆ ಮಾಡಿದ್ದು, ಡೌನ್‌ಲೋಡ್‌ ಮಾಡಿಕೊಳ್ಳಲು ಅವಕಾಶ ಮಾಡಿಕೊಡಲಾಗಿದೆ. 2025 ರ ಏಪ್ರಿಲ್‌ 16 ಮತ್ತು 17ರಂದು ನಡೆಸಲು ಉದ್ದೇಶಿಸಿರುವ 2025ನೇ ಸಾಲಿನ ಸಾಮಾನ್ಯ ಪ್ರವೇಶ ಪರೀಕ್ಷೆಯ (ಯುಜಿಸಿಇಟಿ) ಪ್ರವೇಶ ಪತ್ರವನ್ನು ಭಾನುವಾರ ಬಿಡುಗಡೆ ಮಾಡಿದೆ.ಎಂಜಿನಿಯರಿಂಗ್ ಸೇರಿದಂತೆ ಕೆಇಎ ನಡೆಸುವ ವಿವಿಧ ವೃತ್ತಿಪರ ಕೋರ್ಸ್ ಗಳ ಪ್ರವೇಶ ಪರೀಕ್ಷೆಯನ್ನು‌ 3,30,875 ಅಭ್ಯರ್ಥಿಗಳು ಈ ಬಾರಿ ತೆಗೆದುಕೊಂಡಿದ್ದಾರೆ. ಇಷ್ಟೂ ಮಂದಿ ಪ್ರವೇಶ ಪತ್ರಗಳನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು. ಕ್ಯೂಆರ್ ಕೋಡ್, ಮಾದರಿ ಓಎಂಆರ್ ಶೀಟ್ ಈ ಬಾರಿಯ ವಿಶೇಷ ಎನ್ನುವುದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನೀಡುವ ವಿವರಣೆ.

ಪರೀಕ್ಷೆಗೆ ಪ್ರವೇಶ ಪತ್ರವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ...