Bangalore, ಏಪ್ರಿಲ್ 13 -- Karnataka CET 2025: ದ್ವಿತೀಯ ಪಿಯುಸಿಯ ಮೊದಲನೇ ಪರೀಕ್ಷೆಯಲ್ಲಿ ನಿಗದಿತ ಅರ್ಹತೆ ಗಳಿಸದ ಅಥವಾ ಅನುತ್ತೀರ್ಣರಾಗಿರುವ ಅಭ್ಯರ್ಥಿಗಳು 2 ಮತ್ತು 3ನೇ ಪರೀಕ್ಷೆಯಲ್ಲಿ ಆರ್ಹತೆ ಪಡೆಯಲು ಅವಕಾಶ ಇರುವ ಕಾರಣ, ಯಾರೆಲ್ಲ ಶುಲ್ಕ ಕಟ್ಟಿ ಅರ್ಜಿ ಸಲ್ಲಿಸಿದ್ದೀರೊ ಅವರೆಲ್ಲರೂ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಗೆ ಹಾಜರಾಗಿ ಪರೀಕ್ಷೆ ಬರೆಯಬೇಕು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ಸಲಹೆ ನೀಡಿದ್ದಾರೆ. ಹೊರನಾಡು ಕನ್ನಡಿಗರಿಗೆ ಇದೇ ಏಪ್ರಿಲ್‌ 15ರಂದು ಕನ್ನಡ ಹಾಗೂ 16 ಮತ್ತು 17ರಂದು ವಿಜ್ಞಾನ ವಿಷಯಗಳಿಗೆ ಸಿಇಟಿ ನಡೆಯುಲಿದ್ದು, ಪ್ರಾಧಿಕಾರ ಸಕಲ ರೀತಿಯಲ್ಲಿ ಈಗಾಗಲೇ ತಯಾರಿ ನಡೆಸಿದೆ.

ದ್ವಿತೀಯ ಪಿಯುಸಿಯ ಮೊದಲನೇ ಪರೀಕ್ಷೆಯಲ್ಲಿ ಅಂಕ ಕಡಿಮೆ ಬಂದಿದೆ ಎಂದು ಸಿಇಟಿ ಪರೀಕ್ಷೆ ಬರೆಯದೆ ಕೈಚೆಲ್ಲವುದು ಸರಿಯಲ್ಲ. ದ್ವಿತೀಯ ಪಿಯುಸಿಯ ಎರಡನೇ ಮತ್ತು ಮೂರನೇ ಪರೀಕ್ಷೆ ಬರೆಯುವುದಕ್ಕೂ ಅವಕಾಶ ಇದ್ದು, ಅಲ್ಲಿ ತಮ್ಮ ಫಲಿತಾಂಶವನ್ನು ಉತ್ತಮಪಡಿಸಿಕೊಳ್ಳಬಹುದು....