Bangalore, ಫೆಬ್ರವರಿ 12 -- Karnataka Industry New Policy: ಮುಂದಿನ ಐದು ವರ್ಷದಲ್ಲಿ 20 ಲಕ್ಷ ಉದ್ಯೋಗಗಳನ್ನು ಸೃಷ್ಟಿಸುವ ಗುರಿ, ಬೆಂಗಳೂರು, ಮೈಸೂರು, ಮಂಗಳೂರು ಮಾತ್ರವಲ್ಲದೇ ಕರ್ನಾಟಕದ ಹಿಂದುಳಿದ ಪ್ರದೇಶಗಳಲ್ಲೂ ಕೈಗಾರಿಕಾ ಪ್ರಗತಿಗೆ ಒತ್ತು ನೀಡುವ, ಕೈಗಾರಿಕಾ ಬೆಳವಣಿಗೆಗೆ 3 ವಲಯಗಳ ವ್ಯವಸ್ಥೆ ಸೃಷ್ಟಿ ಮಾಡಿ ಸನ್ ರೈಸ್ ವಲಯ, ಸ್ಥಳೀಯ ತಯಾರಿಕೆಗೆ ಆದ್ಯತೆ ಕೊಡುವ ಕರ್ನಾಟಕದ ನೂತನ ಕೈಗಾರಿಕಾ ನೀತಿ ಬಿಡುಗಡೆಯಾಗಿದೆ. ಕರ್ನಾಟಕ ಸರಕಾರವು ಮುಂದಿನ ಐದು ವರ್ಷಗಳ (2025-30) ಉದ್ಯಮ ಬೆಳವಣಿಗೆಗೆ ರೂಪಿಸಿರುವ ನೂತನ ಕೈಗಾರಿಕಾ ನೀತಿಯನ್ನು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಮಂಗಳವಾರ ಅನಾವರಣಗೊಳಿಸಿದರು.

ಇನ್ನು ಐದು ವರ್ಷಗಳಲ್ಲಿ ರಾಜ್ಯಕ್ಕೆ 7.50 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಆಕರ್ಷಿಸುವ, 20 ಲಕ್ಷ ಉದ್ಯೋಗ ಸೃಷ್ಟಿಸುವ ಮತ್ತು ಸನ್-ರೈಸ್ ವಲಯದಲ್ಲಿ ರಾಜ್ಯವನ್ನು ಇಡೀ ದೇಶಕ್ಕೆ ನಂಬರ್ ಒನ್ ಆಗಿ ಪ್ರತಿಷ್ಠಾಪಿಸುವ ಹೆಗ್ಗುರಿಗಳನ್ನು ಹೊಂದಿದೆ. ಇದನ್ನೆಲ್ಲ ಸಾ...