Bangalore, ಫೆಬ್ರವರಿ 14 -- ಬೆಂಗಳೂರು: ಬೆಂಗಳೂರಿನಲ್ಲಿ ಮುಕ್ತಾಯಗೊಂಡ ಜಾಗತಿಕ ಹೂಡಿಕೆದಾರರ ಸಮಾವೇಶದಲ್ಲಿ ಕರ್ನಾಟಕದ ಹಲವು ನಗರಗಳಲ್ಲಿ ಹೂಡಿಕೆಯ ಒಪ್ಪಂದಗಳಾಗಿವೆ. ಬೆಂಗಳೂರು, ಮೈಸೂರು, ತುಮಕೂರು, ಬೆಳಗಾವಿ, ಕಲಬುರಗಿ, ಧಾರವಾಡ, ವಿಜಯಪುರ ಸಹಿತ ಹಲವು ಜಿಲ್ಲೆಗಳಲ್ಲಿ ಹೂಡಿಕೆಗಳಾಗಲಿವೆ. ಹೂಡಿಕೆಯಿಂದ ಈ ಭಾಗದ ಕೈಗಾರಿಕಾ ಪ್ರದೇಶಗಳು, ಆರೋಗ್ಯ, ಶಿಕ್ಷಣ, ಮೂಲಸೌಕರ್ಯ, ಸಕ್ಕರೆ ಉದ್ಯಮದ ಪ್ರಗತಿಗೆ ಒತ್ತು ಸಿಗಲಿದೆ. ಉದ್ಯೋಗಗಳ ಲಭ್ಯತೆಗೂ ದಾರಿ ಮಾಡಿಕೊಡಲಾಗಿದೆ. ಮಧ್ಯಮ ಹಾಗೂ ಬೃಹತ್‌ ಕೈಗಾರಿಕಾ ಸಚಿವ ಎಂ.ಬಿ.ಪಾಟೀಲ್‌ ಅವರ ನೇತೃತ್ವದಲ್ಲಿ ನಡೆದ ಮೂರು ದಿನಗಳ ಜಾಗತಿಕ ಹೂಡಿಕೆದಾರರ ಸಮಾವೇಶ ಶುಕ್ರವಾರ ಮುಕ್ತಾಯಗೊಂಡಿತು. ಭಾರತ ಮಾತ್ರವಲ್ಲದೇ ವಿಶ್ವದ ನಾನಾ ಭಾಗಗಳಿಂದ ವಿವಿಧ ಕ್ಷೇತ್ರಗಳ ಉದ್ಯಮಿಗಳು ಸಮಾವೇಶದಲ್ಲಿ ಭಾಗಿಯಾಗಿದ್ದರು.

Published by HT Digital Content Services with permission from HT Kannada....