ಭಾರತ, ಫೆಬ್ರವರಿ 7 -- ಮೈಸೂರು: ಕಾವೇರಿ, ಕಪಿಲಾ ಹಾಗೂ ಗುಪ್ತಗಾಮಿನಿಯಾಗಿರುವ ಸ್ಪಟಿಕ ಸರೋವರ ಸಂಧಿಸುವ ಮೈಸೂರು ಜಿಲ್ಲೆಯ ತಿರುಮಕೂಡಲು ನರಸೀಪುರ ಪಟ್ಟಣದಲ್ಲಿ ಕುಂಭಮೇಳ 2025ಕ್ಕೆ ಸಿದ್ದತೆಗಳು ಅಂತಿಮ ಹಂತದಲ್ಲಿವೆ. ಫೆಬ್ರವರಿ 10ರಿಂದ ಮೂರು ದಿನಗಳ ಕಾಲ ನಡೆಯುವ ಕಾರ್ಯಕ್ರಮಗಳ ಪಟ್ಟಿ ಹಾಗೂ ಪುಣ್ಯಸ್ನಾನ, ಧಾರ್ಮಿಕ ಕಾರ್ಯಕ್ರಮಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗಿದೆ. ಮೈಸೂರು ಜಿಲ್ಲಾಡಳಿತ, ತಿ.ನರಸೀಪುರ ತಾಲ್ಲೂಕು ಆಡಳಿತ, ಮುಜರಾಯಿ ಇಲಾಖೆಯ ಸಹಯೋಗ, ವಿವಿಧ ಸಂಘ ಸಂಸ್ಥೆಗಳು, ಮೈಸೂರಿನ ಸುತ್ತೂರು ಮಠ, ಆದಿಚುಂಚನಗಿರಿ ಮಠದ ಸಹಭಾಗಿತ್ವದಲ್ಲಿ ನಾನಾ ಧಾರ್ಮಿಕ ಕಾರ್ಯಕ್ರಮಗಳು ನಡೆಯಲಿವೆ.

3 ದಿನಗಳ ಕಾಲ ನಡೆಯುವ ಕುಂಭಮೇಳದ ಅಂಗವಾಗಿ ವಿವಿಧ ಧಾರ್ಮಿಕ ಕಾರ್ಯಕ್ರಮಗಳು ಆಯೋಜನೆಗೊಂಡಿವೆ.

ಸಂಜೆ 5 ಗಂಟೆಗೆ-ಧರ್ಮಸಭೆ, ಸಾಂಸ್ಕೃತಿಕ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಧ್ವಜಾರೋಹ ನೆರವೇರಿಕೆ.

ಬೆಳ್ಳಿಗ್ಗೆ 11 ಗಂಟೆಗೆ ಧರ್ಮಸಭೆ. ಸಂಜೆ 4 ಗಂಟೆಗೆ ಮಹಾತ್ಮರ ಸಂತರ, ಮಹಾಮಂಡಲೇಶ್ವರರ ತ್ರಿವೇಣಿ ಸಂಗಮ ಕ್ಷೇತ್ರ ಪ್ರವೇಶ: ಗುಂಜಾ...