T narsipur, ಫೆಬ್ರವರಿ 9 -- Karnataka Kumbha Mela 2025: ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನಲ್ಲಿ ಮಹಾ ಕುಂಭಮೇಳದ ಸಡಗರ ಜೋರು ಇರುವಾಗಲೇ ಕರ್ನಾಟಕದಲ್ಲೂ ಕುಂಭಮೇಳ ಫೆಬ್ರವರಿ 10ರ ಸೋಮವಾರದಿಂದ ಆರಂಭವಾಗಲಿದೆ. ಕಾವೇರಿ-ಕಪಿಲಾ ನದಿಗಳ ಜತೆಗೆ ಸ್ಪಟಿಕ ಸರೋವರ ಗುಪ್ತಗಾಮಿನಿ ನದಿಯ ಸಂಗಮ ಕ್ಷೇತ್ರವಾಗಿರುವ ಮೈಸೂರು ಜಿಲ್ಲೆಯ ತಿ.ನರಸೀಪುರದಲ್ಲಿ ಮೂರು ದಿನಗಳ ಕಾಲ ಕುಂಭಮೇಳ ನಡೆಯಲಿದೆ. ಆರು ವರ್ಷಗಳ ನಂತರ ಕುಂಭಮೇಳ ತಿರುಮಕೂಡಲು ನರಸೀಪುರದ ಗುಂಜಾನರಸಿಂಹಸ್ವಾಮಿ ದೇಗುಲದ ಸನ್ನಿಧಿಯಲ್ಲಿ ನಡೆಯುತ್ತಿರುವುದರಿಂದ ಸಿದ್ದತೆಗಳು ಬಹುತೇಕ ಪೂರ್ಣಗೊಂಡಿವೆ. ಮೂರು ದಿನ ಕಾಲವೂ ಕುಂಭಮೇಳದ ಸ್ನಾನವಿದ್ದರೂ ಬುಧವಾರದಂದು ಹೆಚ್ಚಿನ ಭಕ್ತರು ಆಗಮಿಸುವ ನಿರೀಕ್ಷೆಯಿದೆ. ಇದಕ್ಕಾಗಿ ಮೈಸೂರು ಜಿಲ್ಲಾಡಳಿತ ಹಾಗೂ ಮುಜರಾಯಿ ಇಲಾಖೆ ಭಕ್ತರಿಗಾಗಿ ಹಲವು ಕಾರ್ಯಕ್ರಮಗಳನ್ನು ರೂಪಿಸಿವೆ.

ಸೋಮವಾರದಂದು 13ನೇ ಕುಂಭಮೇಳ ತಿ. ನರಸೀಪುರ ಪಟ್ಟಣದ ತ್ರಿವೇಣಿ ಸಂಗಮದಲ್ಲಿ ನಡೆಯಲಿದ್ದು. ತ್ರಿವೇಣಿ ಸಂಗಮ ಸ್ಥಳಕ್ಕೆ ಮೈಸೂರು ಜಿಲ್ಲಾಧಿಕಾರಿ ಲಕ್ಷ್ಮಿಕ...