Bangalore, ಏಪ್ರಿಲ್ 6 -- Karnataka Lorry Strike: ಆರು ದಿನದ ಹಿಂದೆಯೇ ಕರ್ನಾಟಕ ಸರ್ಕಾರವು ಪ್ರತಿ ಲೀಟರ್‌ಗೆ ಎರಡು ರೂಪಾಯಿಯಷ್ಟು ಡೀಸೆಲ್ ಬೆಲೆ ಏರಿಕೆ ಮಾಡಿರುವ ಕ್ರಮವನ್ನು ಕರ್ನಾಟಕ ಲಾರಿ ಮಾಲೀಕರ ಸಂಘ ಬಲವಾಗಿ ವಿರೋಧ ವ್ಯಕ್ತಪಡಿಸಿದೆ. ದರ ಏರಿಕೆಯನ್ನು ವಿರೋಧಿಸಿ ಲಾರಿ ಮಾಲೀಕರ ಸಂಘ ಏಪ್ರಿಲ್​ 14 ರಿಂದ ರಾಜ್ಯ ಸರ್ಕಾರದ ವಿರುದ್ಧ ಮುಷ್ಕರ ನಡೆಸಲು ಮುಂದಾಗಿದೆ. ಈ ಪ್ರತಿಭಟನೆಯಿಂದ ದಿನನಿತ್ಯ ಬಳಕೆಯ ಅಗತ್ಯ ವಸ್ತುಗಳಾದ ದಿನಸಿ, ತರಕಾರಿ, ಹಣ್ಣುಗಳ ಸಹಿತ ವಿವಿಧ ಸರಬರಾಜಿನಲ್ಲಿ ಭಾರೀ ವ್ಯತ್ಯಯವಾಗುವ ನಿರೀಕ್ಷೆಯಿದೆ. ಸರ್ಕಾರದ ಪ್ರತಿಕ್ರಿಯೆ ನೋಡಿಕೊಂಡು ಮುಷ್ಕರವನ್ನು ಅನಿರ್ದಿಷ್ಟಾವಧಿಗೆ ಮುಂದುವರಿಸುವ ಕುರಿತು ಅಂದೇ ತೀರ್ಮಾನವನ್ನು ಕೈಗೊಳ್ಳುವ ಸಾಧ್ಯತೆಗಳಿವೆ.

ಕರ್ನಾಟಕದಲ್ಲಿ ಏಪ್ರಿಲ್‌ 1 ರಂದು ಅನ್ವಯವಾಗುವಂತೆ ಹಲವಾರು ತೆರಿಗೆ ದರಗಳು ಹೆಚ್ಚಿವೆ. ಇದರ ಜತೆಯಲ್ಲಿ ಸರ್ಕಾರವು ಹಾಲು, ವಿದ್ಯುತ್‌ ದರವನ್ನೂ ಹೆಚ್ಚಿಸಿದೆ. ಟೋಲ್‌ ದರಗಳನ್ನು ಕೇಂದ್ರ ಸರ್ಕಾರ ಏರಿಕೆ ಮಾಡಿದೆ. ರಾಜ್ಯದಲ್ಲಿ ಈಗಾಗಲೇ ಎಲ್ಲ...