Bangalore, ಮಾರ್ಚ್ 21 -- Karnataka Monsoon 2025: ಪ್ರಸ್ತುತ ವರ್ಷದ ಮುಂಗಾರು ಹಂಗಾಮಿನಲ್ಲಿ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗುವ ಸಾಧ್ಯತೆ ಇದೆ. ಅಲ್ಲದೇ ಬೇಸಿಗೆ ಇರುವ ಏಪ್ರಿಲ್‌ ಹಾಗೂ ಮೇ ತಿಂಗಳಿನಲ್ಲೂ ಮಳೆಯ ನಿರೀಕ್ಷೆಯಿದೆ. ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರ ಅಧ್ಯಕ್ಷತೆಯಲ್ಲಿ 2025ನೇ ಸಾಲಿನ ಹವಾಮಾನ ಪರಿಸ್ಥಿತಿ ಕುರಿತು ಗುರುವಾರ ನಡೆದ ಸಚಿವ ಸಂಪುಟ ಉಪಸಮಿತಿ ಸಭೆಯಲ್ಲಿ ಈ ಕುರಿತು ಚರ್ಚಿಸಲಾಯಿತು. ಈ ವೇಳೆ ಸಚಿವರಿಗೆ ಮಾಹಿತಿ ನೀಡಿದ ಅಧಿಕಾರಿಗಳು, "ಪ್ರಸ್ತುತ ವರ್ಷ ಪೂರ್ವ ಮುಂಗಾರಿನಲ್ಲಿ ಉತ್ತರ ಕರ್ನಾಟಕ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಈಗಾಗಲೇ ವಾಡಿಕೆಗಿಂತ ಅಧಿಕ ಮಳೆಯಾಗಿದೆ. ಏಪ್ರಿಲ್-ಮೇ ತಿಂಗಳಲ್ಲಿ ಕರಾವಳಿ ಭಾಗದಲ್ಲಿ ಉತ್ತಮ ಮಳೆಯ ನಿರೀಕ್ಷೆ ಇದೆ. ಆದರೆ, ಜೂನ್ನಿಂದ ಸೆಪ್ಟೆಂಬರ್ವರೆಗಿನ ಮಾನ್ಸೂನ್ ಅವಧಿಯಲ್ಲಿ ವಾಡಿಕೆಗಿಂತ ಅಧಿಕ ಮಳೆಯಾಗಲಿದ್ದು, ಕೃಷಿ ಚಟುವಟಿಕೆಗಳೂ ಚುರುಕುಗೊಳ್ಳಲಿವೆ " ಎಂದು ಮಾಹಿತಿ ನೀಡಿದರು.

"ಸೆಪ್ಟೆಂಬರ್ ನಂತರದ ಹಿಂಗಾರಿನಲ್ಲೂ ಈ ವರ್ಷ ...