Dakshina kannada, ಏಪ್ರಿಲ್ 12 -- Karnataka Naxal News: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನಲ್ಲಿ ನಕ್ಸಲ್ ಚಟುವಟಿಕೆ ಪ್ರಕರಣಗಳಿಗೆ ಸಂಬಂಧಿಸಿದಂತೆ ವಿಚಾರಣೆಗಾಗಿ ಕೇರಳದ ಜೈಲಿನಿಂದ ಬಾಡಿ ವಾರೆಂಟ್ ಮೂಲಕ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದ ಇಬ್ಬರು ನಕ್ಸಲ್ ನಾಯಕರುಗಳ ಪೊಲೀಸ್‌ಕಸ್ಟಡಿಯ ಅವಧಿ ಮುಗಿದ ಹಿನ್ನಲೆಯಲ್ಲಿ ಅವರನ್ನು ಶುಕ್ರವಾರ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು ಪಡಿಸಿ ನ್ಯಾಯಾಲಯದ ಆದೇಶದಂತೆ ಕೇರಳದ ಜೈಲಿಗೆ ಮರಳಿ ಕಳುಹಿಸಲಾಗಿದೆ 2021ರ ನವೆಂಬರ್ 8ರಂದು ಕೇರಳ ರಾಜ್ಯದ ಪೊಲೀಸರು ನಕ್ಸಲ್ ನಾಯಕರಾದ ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ನಿವಾಸಿ ನಕ್ಸಲ್ ಪಶ್ಚಿಮ ಘಟ್ಟದ ವಿಶೇಷ ಸಮಿತಿಯ ಕಾರ್ಯದರ್ಶಿಯಾಗಿದ್ದ ಬಿ.ಜಿ.ಕೃಷ್ಣಮೂರ್ತಿ (50) ಮತ್ತು ಚಿಕ್ಕಮಗಳೂರು ಜಿಲ್ಲೆಯ ಕಳಸ ನಿವಾಸಿ ಸಾವಿತ್ರಿ (36)ಯನ್ನು ಬಂಧಿಸಿದ್ದರು. ಕರ್ನಾಟಕ, ಕೇರಳ, ತಮಿಳುನಾಡಿನಲ್ಲಿ ಬಿ.ಜಿ.ಕೃಷ್ಣಮೂರ್ತಿ ವಿರುದ್ಧ 53 ಪ್ರಕರಣ ,ಸಾವಿತ್ರಿ ವಿರುದ್ಧ 22 ಪ್ರಕರಣ ತನಿಖೆಯಲ್ಲಿ...