Bangalore, ಫೆಬ್ರವರಿ 14 -- ಬೆಂಗಳೂರು:ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ನಡುವಿನ ಸಮರ ದಿನದಿಂದ ದಿನಕ್ಕೆ ತಾರಕಕ್ಕೇರುತ್ತಿದೆ. ಒಂದು ಕಡೆ ಮುಖ್ಯಮಂತ್ರಿಗಳ ಆಪ್ತ ಸಚಿವರು, ಪ್ರದೇಶ ಕಾಂಗ್ರೆಸ್‌ ಅಧ್ಯಕ್ಷರ ಬದಲಾಣೆ ಮತ್ತು ಉಳಿದ ಅವಧಿಗೂ ಸಿದ್ದರಾಮಯ್ಯ ಅವರನ್ನೇ ಸಿಎಂ ಹುದ್ದೆಯಲ್ಲಿ ಮುಂದುವರಸಬೇಕು ಎಂದು ಲಾಬಿ ನಡೆಸುತ್ತಿದ್ದರೆ ಇತ್ತ ಡಿಕೆಶಿವಕುಮಾರ್‌ ಸಿಎಂ ಆಪ್ತ ಸಚಿವರಿಗೆ ಠಕ್ಕರ್‌ ಕೊಡಲು ಮಂದಾಗಿದ್ದಾರೆ. ರಾಜ್ಯ ಸಚಿವ ಸಂಪುಟವನ್ನು ಪುನಾರಚಿಸಬೇಕು ಎಂಬ ಹೊಸ ಬೇಡಿಕೆಯನ್ನು ಶಿವಕುಮಾರ್‌ ಹೈಮಾಂಡ್‌ ಮುಂದಿಟ್ಟಿದ್ದು, ಈ ಮೂಲಕ ಸಿಎಂ ಪಾಳಯದ ಸಚಿವರನ್ನು ಮಾಜಿ ಮಾಡಲು ಮುಂದಾಗಿದ್ದಾರೆ. ಸಿದ್ದರಾಮಯ್ಯ ಅವರ ಹತ್ತು ಸಚಿವರನ್ನು ಕೆಳಗಿಳಿಸಲು ಪಟ್ಟು ಹಿಡಿದಿದ್ದಾರೆ. ಬಲ್ಲ ಮೂಲಗಳ ಪ್ರಕಾರ ಇತ್ತೀಚೆಗೆ ದೆಹಲಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಶಿವಕುಮಾರ್‌ ಈ ಬೇಡಿಕೆಯನ್ನು ಹೈಕಮಾಂಡ್‌ ಮುಂದಿಟ್ಟಿದ್ದಾರೆ ಎಂದು ಅವರ ಆಪ್ತರು ಖಚಿತಪಡಿಸಿದ್ದಾರೆ.

ಅಸಮರ್ಥ ಸಚಿವರ ಪಟ್ಟಿಯನ್ನ...