Bangalore, ಏಪ್ರಿಲ್ 3 -- Karnataka Politics: ಕರ್ನಾಟಕದಲ್ಲಿ ಬಿಜೆಪಿ ಜತೆ ಜಾತ್ಯಾತೀತ ಜನತಾದಳ (ಜೆಡಿಎಸ್)‌ ಹೊಂದಾಣಿಕೆ ಮಾಡಿಕೊಂಡಿದೆ. ಕಳೆದ ಲೋಕಸಭಾ ಚುನಾವಣೆಯಲ್ಲಿ ಘಟಾನುಘಟಿಗಳ ಕೊರತೆ ಮತ್ತು ಕಾಂಗ್ರೆಸ್‌ ಸರ್ಕಾರದ ಐದು ಗ್ಯಾರಂಟಿಗಳ ಅಬ್ಬರದ ನಡುವೆಯೂ ಎನ್‌ ಡಿ ಎ ಒಕ್ಕೂಟ 28 ರಲ್ಲಿ 19 ಕ್ಷೇತ್ರಗಳಲ್ಲಿ ಗೆಲುವು ಸಾಧಿಸಿದೆ. ಈ ಹೊಂದಾಣಿಕೆಗಾಗಿ ಜೆಡಿಸ್‌ ವರಿಷ್ಠ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಪ್ರಧಾನಿ ಮೋದಿ ಸಂಪುಟದಲ್ಲಿ ಸಚಿವರೂ ಆಗಿದ್ದಾರೆ. ಅಲ್ಲಿಗೆ ಹೊಂದಾಣಿಕೆ ಮುಗಿದು ಹೋಯಿತೇ ಎಂದು ಭಾಸವಾಗುತ್ತಿದೆ. ಏಕೆಂದರೆ ಲೋಕಸಭಾ ಚುನಾವಣೆ ನಂತರ ರಾಜ್ಯ ಬಿಜೆಪಿ ಮತ್ತು ಜೆಡಿಎಸ್‌ ನಡುವೆ ಹೊಂದಾಣಿಕೆ ಕಣ್ಮರೆಯಾಗಿದ್ದು, ಕಂದಕ ಮತ್ತಷ್ಟು ವಿಸ್ತಾರವಾಗುತ್ತಾ ಹೋಗುತ್ತಿದೆ. ಒಟ್ಟಾರೆ ಎರಡೂ ಪಕ್ಷಗಳಲ್ಲಿ ಸಮನ್ವಯತೆ ಕೊರತೆ ಉಂಟಾಗಿದೆ.

ಇತ್ತೀಚೆಗೆ ಪೂರ್ಣಗೊಂಡ ವಿಧಾನಮಂಡಲದ ಅಧಿವೇಶನದಲ್ಲಿ ಉಭಯ ಪಕ್ಷಗಳ ನಡುವೆ ಹೊಂದಾಣಿಕೆ ಇಲ್ಲ ಎನ್ನುವುದು ಮತ್ತೊಮ್ಮೆ ಸಾಬೀತಾಗಿದೆ. ಮುಸ್ಲಿಂ ಸಮುದಾಯಕ್ಕೆ ಶೇ....