Bangalore, ಏಪ್ರಿಲ್ 8 -- ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯು ಕೆಎಸ್ಇಎಬಿ 12 ನೇ ತರಗತಿ ಫಲಿತಾಂಶವನ್ನು ಪ್ರಕಟಿಸಿದೆ. ಬೆಂಗಳೂರಿನಲ್ಲಿ ಕರ್ನಾಟಕ ಶಾಲಾ ಪರೀಕ್ಷಾ ಮತ್ತು ಮೌಲ್ಯಮಾಪನ ಮಂಡಳಿಯಲ್ಲಿ ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸಚಿವ ಮಧುಬಂಗಾರಪ್ಪ ಹಾಗೂ ಮಂಡಳಿ ಅಧ್ಯಕ್ಷ ಎಚ್‌.ಬಸವರಾಜೇಂದ್ರ ಫಲಿತಾಂಶವನ್ನು ಪ್ರಕಟಿಸಿದರು. ಒಟ್ಟುಶೇ 73. 45 ಮಕ್ಕಳು ಉತ್ತೀರ್ಣರಾಗಿದ್ದಾರೆ. ಉಡುಪಿ ಜಿಲ್ಲೆ ಮೊದಲ ಸ್ಥಾನವನ್ನು ಪಡೆದುಕೊಂಡಿದೆ. ಈ ಬಾರಿಯೂ ಪ್ರತಿ ವರ್ಷದಂತೆಯೇ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಕಲಾ, ವಾಣಿಜ್ಯ ಹಾಗೂ ವಿಜ್ಞಾನ ವಿಭಾಗದ ಟಾಪರ್‌ಗಳ ಹೆಸರುಗಳನ್ನು ಪ್ರಕಟಿಸಲಾಗಿದೆ. ಕಲಾ ವಿಭಾಗದಲ್ಲಿ ಬಳ್ಳಾರಿಯ ಸಂಜನಾ ಬಾಯಿ 597 ಅಂಕದೊಂದಿಗೆ ಟಾಪರ್‌ ಎನ್ನಿಸಿದ್ದಾರೆ. ಅಲ್ಲದೇ ಜಿಲ್ಲಾವಾರು ಪಿಯುಸಿ ಫಲಿತಾಂಶವನ್ನೂ ನೀಡಲಾಗಿದೆ. ಕಳೆದ ತಿಂಗಳಲ್ಲಿ ಪಿಯುಸಿ ಪರೀಕ್ಷೆ ನಡೆದು ಮೌಲ್ಯಮಾಪನವೂ ಶುರುವಾಗಿತ್ತು. ಕಳೆದ ವರ್ಷಕ್ಕಿಂತ ಎರಡು ದಿನ ಮೊದಲೇ ಈ ಬಾರಿ ಫಲಿತಾಂಶವನ್ನು ಪ್ರಕಟಿಸಿರುವುದು...