ಭಾರತ, ಮಾರ್ಚ್ 23 -- ಬೆಂಗಳೂರು: ಈ ವರ್ಷ ಬಿಸಿಲಿನ ತಾಪ ಬಹಳ ಜೋರಿದ್ದು, ರಾಜ್ಯದಾದ್ಯಂತ ಬಿಸಿಲಿನ ಝಳಕ್ಕೆ ಜನರು ತತ್ತರಿಸಿ ಹೋಗಿದ್ದಾರೆ. ಭೂಮಿಯು ಕಾದ ಹೆಂಚಿನಂತಾಗಿದೆ. ಹಲವೆಡೆ ಬಿಸಿಗಾಳಿಯೂ ಬೀಸುತ್ತಿದ್ದು ಜನಜೀವನ ತೊಂದರೆಗೆ ಸಿಲುಕಿದೆ. ಅತಿಯಾದ ಬಿಸಿಲಿನ ತಾಪದಿಂದ ಕಂಗೆಟ್ಟ ಭೂಮಿಯ ಒಡಲನ್ನು ತಂಪು ಮಾಡಲು ನಿನ್ನೆ ರಾಜ್ಯದ ಕೆಲವು ಭಾಗಗಳಲ್ಲಿ ವರುಣರಾಯನ ಆಗಮನವಾಗಿತ್ತು. ಬೆಂಗಳೂರು ಸೇರಿ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ನಿನ್ನೆ ಮಳೆಯಾಗಿದ್ದು ಕೆಲವೆಡೆ ಅವಾಂತರವನ್ನೇ ಸೃಷ್ಟಿಸಿತ್ತು. ಇಂದು (ಮಾರ್ಚ್ 23) ಕೂಡ ಇನ್ನೇನು ಕೆಲ ಹೊತ್ತಿನಲ್ಲಿ ರಾಜ್ಯದ ಈ ಜಿಲ್ಲೆಗಳಲ್ಲಿ ಮಳೆ ಬೀಳುವ ನಿರೀಕ್ಷೆ ಇದೆ.

ಬಾಗಲಕೋಟೆ, ಬಳ್ಳಾರಿ, ಬೀದರ್, ಚಾಮರಾಜನಗರ, ಚಿಕ್ಕಮಗಳೂರು, ದಕ್ಷಿಣ ಕನ್ನಡ, ಹಾಸನ, ಕೊಡಗು, ಕೊಪ್ಪಳ, ರಾಯಚೂರು, ರಾಮನಗರ, ತುಮಕೂರು, ವಿಜಯನಗರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಇನ್ನು 3 ಗಂಟೆಗಳಲ್ಲಿ ಮಳೆಯಾಗುವ ನಿರೀಕ್ಷೆ ಇದೆ ಎಂದು ಸಂಜೆ 4.30 ರ ಹೊತ್ತಿಗೆ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಮೇಲ್ವಿಚಾರಣಾ ಕ...