Bangalore, ಮಾರ್ಚ್ 30 -- ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಭಾನುವಾರ ಸಂಜೆ ಗುಡುಗು ಸಹಿತ ಮಳೆಯಾಗಬಹುದು.

ಯುಗಾದಿ ಹಬ್ಬದ ದಿನ ಸಾಮಾನ್ಯವಾಗಿ ಸಣ್ಣ ಮಳೆಯಾಗದರೂ ಆಗುತ್ತದೆ. ಈ ಬಾರಿಯೂ ಉತ್ತರ ಕರ್ನಾಟಕದ ಕೆಲವು ಜಿಲ್ಲೆಗಳಲ್ಲಿ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆಯು ನೀಡಿದೆ.

ಮುಂದಿನ 3 ಗಂಟೆಗಳಲ್ಲಿ ಬೆಳಗಾವಿ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿ ಅಲ್ಲಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಬೆಂಗಳೂರು ಹವಾಮಾನ ಇಲಾಖೆ ತಿಳಿಸಿದೆ.

ಮುಂದಿನ 3 ಗಂಟೆಗಳಲ್ಲಿ ಧಾರವಾಡ, ಗದಗದ ಕೆಲವು ಸ್ಥಳಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎನ್ನುವ ಮುನ್ಸೂಚನೆಯನ್ನು ನೀಡಲಾಗಿದೆ.

ಭಾನುವಾರ ಸಂಜೆ ಹಲವು ಭಾಗಗಳಲ್ಲಿ ಮೋಡ ಕವಿದ ವಾತಾವರಣವಿದೆ. ಆದರೆ ಮಳೆ ಮಾತ್ರ ಕೆಲವು ಭಾಗದಲ್ಲಿ ಆಗಲಿದೆ ಎಂದು ತಿಳಿಸಲಾಗಿದೆ.

ಈಗಾಗಲೇ ಮಾರ್ಚ್‌ ತಿಂಗಳಿನಲ್ಲಿ ಹಲವು ಜಿಲ್ಲೆಗಳಲ್ಲಿ ಉತ್ತಮ ಮಳೆಯೇ ಅಗಿದೆ. ಅರ್ಧಕ್ಕೂ ಹೆಚ್ಚು ಕರ್ನಾಟಕದ ಭಾಗದಲ್ಲಿ ಮಾರ್ಚ್‌ ಮಳೆ ಜನರಲ್ಲಿ ಖುಷಿ ತಂದಿದೆ.

ಮೈಸೂರಿನಲ್ಲೂ ಕಳೆದ...