Kalaburgi, ಮಾರ್ಚ್ 20 -- Karnataka Rains: ಸತತ ಎರಡು ತಿಂಗಳಿನಿಂದ ಬಿರು ಬಿಸಿಲಿನಿಂದ ಬಸವಳಿದಿರುವ ಉತ್ತರ ಕರ್ನಾಟಕದ ಪ್ರಮುಖ ಜಿಲ್ಲೆಗಳಾದ ಕಲಬುರಗಿ, ಬೀದರ್‌, ಯಾದಗಿರಿ, ವಿಜಯಪುರ ಹಾಗೂ ರಾಯಚೂರು ಭಾಗದಲ್ಲಿ ಈ ವಾರಾಂತ್ಯದಲ್ಲಿ ಮಳೆಯಾಗಲಿದೆ. ಐದಾರು ಜಿಲ್ಲೆಗಳ ಪ್ರತ್ಯೇಕ ಸ್ಥಳಗಳಲ್ಲಿ ಮಾರ್ಚ್‌ 22 ಹಾಗೂ 23ರಂದು ಲಘು ಮಳೆಯಾಗಬಹುದು ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ಮುನ್ಸೂಚನೆ ನೀಡಿದೆ. ಈಗಾಗಲೇ ಕಲಬುರಗಿ, ಬಾಗಲಕೋಟೆ ಸಹಿತ ಹಲವು ಜಿಲ್ಲೆಗಳಲ್ಲಿ ಉಷ್ಣಾಂಶದ ಪ್ರಮಾಣದ 40 ಡಿಗ್ರಿ ಸೆಲ್ಸಿಯಸ್‌ ದಾಟಿದ್ದು, ಈಗಲೂ ಅದೇ ವಾತಾವರಣವಿದೆ. ದಕ್ಷಿಣ ಕರ್ನಾಟಕದ ಹಲವು ಕಡೆಗಳಲ್ಲಿ ನಾಲ್ಕೈದು ದಿನಗಳಿಂದ ಸಾಧಾರಣ ಮಳೆಯಾಗಿದ್ದು. ಇದು ಮುಂದಿನ ಒಂದು ವಾರದವರೆಗೂ ಮುಂದುವರೆಯುವ ಲಕ್ಷಣಗಳಿವೆ.

ಭಾರತೀಯ ಹವಾಮಾನ ಇಲಾಖೆಯು ನೀಡಿರುವ ಮಾಹಿತಿಯ ಪ್ರಕಾರ, ಮಾರ್ಚ್‌ 22ರಿಂದ 25ರವರೆಗೆ ಕರ್ನಾಟಕದ ವಿವಿಧ ಭಾಗಗಳಲ್ಲಿ ಮಳೆಯಾಗಲಿದೆ. ಈಗಾಗಲೇ ಹಲವು ಭಾಗಗಳಲ್ಲಿ ಮಳೆಯಾಗುತ್ತಿದ್ದರೂ ಉತ್ತರ ಕರ್ನಾಟಕ...