Bangalore, ಏಪ್ರಿಲ್ 4 -- Karnataka Rains: ಕರ್ನಾಟಕದಲ್ಲಿ ಬಿರು ಬಿಸಿಲಿನ ನಡುವೆಯೂ ಬಹುತೇಕ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಈಗಾಗಲೇ ಕೆಲವು ದಿನಗಳಿಂದ ಮಳೆಯಾಗುತ್ತಿದ್ದು. ಗುರುವಾರವೂ ಭಾರೀ ಮಳೆಯೇ ಆಗಿದೆ. ಬೆಂಗಳೂರು ನಗರ ಸೇರಿದಂತೆ ಪ್ರಮುಖ ಜಿಲ್ಲೆಗಳಲ್ಲಿ ಮಳೆಯಾಗುತ್ತಿದೆ. ಶುಕ್ರವಾರದಂದೂ 12 ಜಿಲ್ಲೆಗಳಲ್ಲಿ ಭಾರೀ ಮಳೆ ಗುಡುಗು ಸಹಿತ ಆಗಬಹುದು ಎನ್ನುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ನೀಡಿದೆ. ಅದರಲ್ಲೂ ದಕ್ಷಿಣ ಕನ್ನಡ ಜಲ್ಲೆಯಲ್ಲಿ ಬಿರುಗಾಳಿ, ಗುಡುಗು ಸಹಿತ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ನೀಡಲಾಗಿದೆ. ಬೆಳಗಾವಿ, ವಿಜಯಪುರ, ಕಲಬುರಗಿ, ಬೀದರ್‌, ಹಾಸನ, ಮೈಸೂರು,ಕೊಡಗು, ಬಳ್ಳಾರಿ, ಚಿತ್ರದುರ್ಗ, ವಿಜಯನಗರ ಜಿಲ್ಲೆಯಲ್ಲಿ ಮಳೆಯಾಗುವ ಸೂಚನೆಯಿದೆ. ಬೆಂಗಳೂರು ನಗರದಲ್ಲೂ ಮೋಡ ಕವಿದ ವಾತಾವರಣ ಇರಲಿದ್ದು, ಹಗುರ ಮಳೆಯಾಗುವ ಸಾಧ್ಯತೆಗಳಿವೆ.

ಶುಕ್ರವಾರದಂದು ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಗಾಳಿಯ ವೇಗ ಹೆಚ್ಚಲಿದೆ. ಅಲ್ಲಲ್ಲಿ ಬಿರುಗಾಳಿಯ ವಾತಾವರಣವೂ ಇರಲ...