Bengaluru, ಏಪ್ರಿಲ್ 6 -- Karnataka Rains:ಕರ್ನಾಟಕದಲ್ಲಿ ಕೆಲ ದಿನಗಳಿಂದ ಮಳೆಯಾಗುತ್ತಲೇ ಇದೆ. ಈ ವಾರವೂ ಕರಾವಳಿ, ಮಲೆನಾಡು, ಉತ್ತರ ಕರ್ನಾಟಕ, ದಕ್ಷಿಣ ಕರ್ನಾಟಕದ ಹಲವು ಭಾಗಗಳಲ್ಲಿ ಮಳೆಯಾಗುವ ಮುನ್ಸೂಚನೆಯಿದೆ. ಭಾನುವಾರದಂದು ಕೂಡ ಕರ್ನಾಟಕದ 12ಕ್ಕೂ ಅಧಿಕ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದ್ದು, ಅಲ್ಲಲ್ಲ ಗುಡುಗಿನ ಸದ್ದೂ ಕೇಳಿ ಬರಲಿದೆ. ಕರಾವಳಿ ಕರ್ನಾಟಕದ ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆ. ಉತ್ತರ ಒಳನಾಡಿನ ಧಾರವಾಡ, ಗದಗ, ಹಾವೇರಿ ಜಿಲ್ಲೆ, ದಕ್ಷಿಣ ಕರ್ನಾಟಕದ ಶಿವಮೊಗ್ಗ, ಹಾಸನ, ಚಿಕ್ಕಮಗಳೂರು, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರ ಮುನ್ಸೂಚನೆ ನೀಡಿದೆ. ಬೆಂಗಳೂರಿನಲ್ಲಿಯೂ ಬಿಸಿಲಿನ ಪ್ರಮಾಣ ತಗ್ಗಿದ್ದು, ಅಲ್ಲಲ್ಲಿ ಹಗುರ ಮಳೆಯಾಗಬಹುದು ಎಂದು ಹವಾಮಾನ ವರದಿಯಲ್ಲಿ ತಿಳಿಸಲಾಗಿದೆ.

Published by HT Digital Content Services with permission from HT Kannada....