ಬೆಂಗಳೂರು, ಮಾರ್ಚ್ 21 -- Karnataka SSLC Exam 2025: ಸುಡುವ ಬಿಸಿಲಿನ ನಡುವೆ ಕರ್ನಾಟಕದ್ಯಾಂತ 2025ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ಇಂದು ಆರಂಭವಾಗುತ್ತಿದೆ. ಕರ್ನಾಟಕದ 2,818 ಪರೀಕ್ಷಾ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳು ನಡೆಯಲಿವೆ. ಸುಮಾರು 8.96 ಲಕ್ಷ ವಿದ್ಯಾರ್ಥಿ ವಿದ್ಯಾರ್ಥಿನಿಯರು ಎಸ್‌ಎಸ್‌ಎಲ್ಸಿ ಪರೀಕ್ಷೆ ಬರೆಯಲಿದ್ದಾರೆ. ಮಾರ್ಚ್‌ 21ರಂದು ಪ್ರಥಮ ಭಾಷೆ ಪರೀಕ್ಷೆ ನಡೆಯಲಿದೆ. ಅಂದರೆ, ಕನ್ನಡ, ತೆಲುಗು, ತಮಿಳು, ಹಿಂದಿ, ಮರಾಠಿ, ಉರ್ದು ಮತ್ತು ಇಂಗ್ಲಿಷ್‌ ಪರೀಕ್ಷೆಗಳು ನಡೆಯಲಿವೆ. ಬೆಳಗ್ಗೆ 10 ಗಂಟೆಗೆ ಪರೀಕ್ಷೆ ಆರಂಭವಾಗಲಿದ್ದು, ಅಪರಾಹ್ನ 1.15 ಗಂಟೆಯವರೆಗೆ ಎಕ್ಸಾಂ ನಡೆಯಲಿದೆ. ಪರೀಕ್ಷೆಯಲ್ಲಿ ನಕಲು, ಅಕ್ರಮ ನಡೆಯದಂತೆ ಕಟ್ಟೆಚ್ಚರವಹಿಸಲಾಗಿದೆ.

ಎಸ್‌ಎಸ್‌ಎಲ್‌ಸಿ ಪರೀಕ್ಷೆಯನ್ನು ಪಾರದರ್ಶಕವಾಗಿ, ಯಾವುದೇ ಅಹಿತಕರ ಘಟನೆ ನಡೆಯದಂತೆ ನಡೆಸಲು ಕ್ರಮ ವಹಿಸಲಾಗಿದೆ. ಕರ್ನಾಟಕದ 15,881 ಪ್ರೌಢಶಾಲೆಗಳ ವಿದ್ಯಾರ್ಥಿಗಳು ಪರೀಕ್ಷೆ ಬರೆಯಲಿದ್ದಾರೆ. ಇವರಲ್ಲಿ 4.61 ಲಕ್ಷ ವಿದ್ಯಾರ್ಥ...