Bangalore, ಏಪ್ರಿಲ್ 2 -- Karnataka Summer: ಕರ್ನಾಟಕದಲ್ಲಿ ಈ ಬಾರಿ ಬಿಸಿಲು ಕೊಂಚ ಹೆಚ್ಚೇ ಇದೆ. ಅದರಲ್ಲೂ ಉತ್ತರ ಕರ್ನಾಟಕದಲ್ಲಿ ಬಿಸಿಲಿನ ಪ್ರಮಾಣ ಭಾರೀ ಏರಿಕೆ ಕಂಡಿದೆ. ಬರುವ ಏಪ್ರಿಲ್‌ ಹಾಗೂ ಮೇ ನಲ್ಲಿ ಬಿಸಿಲಿನ ಪ್ರಮಾಣ ಇನ್ನೂ ಹೆಚ್ಚುವ ಮುನ್ಸೂಚನೆ ಇದೆ. ಈ ಕಾರಣದಿಂದ ಕರ್ನಾಟಕ ಸರ್ಕಾರವು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಕಚೇರಿ ಸಮಯವನ್ನು ಬದಲಾವಣೆ ಮಾಡಿದೆ. ಗುರುವಾರದಿಂದಲೇ ಕಲಬುರಗಿ ಹಾಗೂ ಬೆಳಗಾವಿ ವಿಭಾಗದ ಒಟ್ಟು ಹದಿನಾಲ್ಕು ಜಿಲ್ಲೆಗಳಲ್ಲಿ ಕಚೇರಿ ಸಮಯ ಬೆಳಿಗ್ಗೆ 8 ರಿಂದ ಮಧ್ಯಾಹ್ನ1.30 ರವರೆಗೆ ಇರಲಿದೆ. ಕಲಬುರಗಿ. ಬೀದರ್‌, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ಯಾದಗಿರಿ, ವಿಜಯಪುರ, ಬಾಗಲಕೋಟೆ, ಬೆಳಗಾವಿ, ಉತ್ತರ ಕನ್ನಡ, ಧಾರವಾಡ,ಗದಗ ಹಾಗೂ ಹಾವೇರಿ ಜಿಲ್ಲೆಗಳಿಗೆ ಈ ಆದೇಶ ಜಾರಿಯಾಗಲಿದೆ ಎಂದು ತಿಳಿಸಲಾಗಿದೆ.

ಉತ್ತರ ಕರ್ನಾಟಕದಲ್ಲಿ ಕಚೇರಿ ಸಮಯ ಬದಲಾವಣೆ.

Published by HT Digital Content Services with permission from HT Kannada....