Bangalore, ಏಪ್ರಿಲ್ 2 -- Karnataka Summer: ಕರ್ನಾಟಕದಲ್ಲಿ ಈ ಬಾರಿ ಬಿಸಿಲು ಕೊಂಚ ಹೆಚ್ಚೇ ಇದೆ. ಅದರಲ್ಲೂ ಉತ್ತರ ಕರ್ನಾಟಕದಲ್ಲಿ ಬಿಸಿಲಿನ ಪ್ರಮಾಣ ಭಾರೀ ಏರಿಕೆ ಕಂಡಿದೆ. ಬರುವ ಏಪ್ರಿಲ್ ಹಾಗೂ ಮೇ ನಲ್ಲಿ ಬಿಸಿಲಿನ ಪ್ರಮಾಣ ಇನ್ನೂ ಹೆಚ್ಚುವ ಮುನ್ಸೂಚನೆ ಇದೆ. ಈ ಕಾರಣದಿಂದ ಕರ್ನಾಟಕ ಸರ್ಕಾರವು ಉತ್ತರ ಕರ್ನಾಟಕದ ಜಿಲ್ಲೆಗಳಲ್ಲಿ ಕಚೇರಿ ಸಮಯವನ್ನು ಬದಲಾವಣೆ ಮಾಡಿದೆ. ಗುರುವಾರದಿಂದಲೇ ಕಲಬುರಗಿ ವಿಭಾಗದ ಏಳು ಹಾಗೂ ಬೆಳಗಾವಿ ವಿಭಾಗದ ಎರಡು ಜಿಲ್ಲೆಗಳಲ್ಲಿ ಕಚೇರಿ ಸಮಯ ಬೆಳಿಗ್ಗೆ 8 ರಿಂದ ಮಧ್ಯಾಹ್ನ1.30 ರವರೆಗೆ ಇರಲಿದೆ. ಕಲಬುರಗಿ, ಬೀದರ್, ರಾಯಚೂರು, ಕೊಪ್ಪಳ, ಬಳ್ಳಾರಿ, ವಿಜಯನಗರ, ಯಾದಗಿರಿ, ವಿಜಯಪುರ, ಬಾಗಲಕೋಟೆ ಜಿಲ್ಲೆಗಳಿಗೆ ಈ ಆದೇಶ ಜಾರಿಯಾಗಲಿದೆ ಎಂದು ತಿಳಿಸಲಾಗಿದೆ.
ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷರು ಮನವಿ ಮಾಡಿ ಉತ್ತರ ಕರ್ನಾಟಕದ ಬೆಳಗಾವಿ ಹಾಗೂ ಕಲಬುರಗಿ ವಿಭಾಗದ ಜಿಲ್ಲೆಗಳಲ್ಲಿ ಬಿಸಿಲಿನ ಪ್ರಮಾನ ಏರಿಕೆಯಾಗಿದೆ. ಬಿಸಿಲಿನ ತಾಪಮಾನ ಹೆಚ್ಚಾಗಿರುವುದರಿಂದ ನೌಕರರು ಕರ್ತವ್ಯ ನಿರ...
Click here to read full article from source
To read the full article or to get the complete feed from this publication, please
Contact Us.