Vijayapura, ಫೆಬ್ರವರಿ 21 -- Karnataka Summer 2025: ಮಧ್ಯ ಕರ್ನಾಟಕ, ಉತ್ತರ ಕರ್ನಾಟಕದ ಹತ್ತಕ್ಕೂ ಹೆಚ್ಚು ಜಿಲ್ಲೆಗಳಿಗೆ ಕುಡಿಯುವ ನೀರು ಒದಗಿಸುವ ಕೃಷ್ಣಾ ಕಣಿವೆಯ ಆರು ಜಲಾಶಯಗಳಲ್ಲಿ ಹಿಂದಿನ ವರ್ಷಕ್ಕಿಂತ ಹೆಚ್ಚಿನ ನೀರು ಸಂಗ್ರಹವಿದೆ. ಆದರೆ ಬೇಡಿಕೆ ಅಧಿಕಕವಾಗಿದೆ. ಈಗಾಗಲೇ ಆಲಮಟ್ಟಿ, ನಾರಾಯಣಪುರ, ತುಂಗಭದ್ರಾ ಸಹಿತ ಆರು ಜಲಾಶಯಗಳಿಂದಲೂ ಭಾರೀ ಪ್ರಮಾಣದಲ್ಲಿ ನೀರು ಹೊರ ಹರಿಸಲಾಗುತ್ತಿದೆ. ಗುರುವಾರ ಒಂದೇ ದಿನ ಮೂರು ಟಿಎಂಸಿ ನೀರು ಹೊರಕ್ಕೆ ಹೋಗಿದೆ. ಉತ್ತರ ಕರ್ನಾಟಕದ ಜಿಲ್ಲೆಗಳಿಗೆ ಕುಡಿಯುವ ನೀರು ಹಾಗೂ ನೀರಾವರಿಗೆಂದು ನೀರು ನಾಲೆಗಳಿಗೆ ನೀರು ಹರಿಸುತ್ತಿರುವ ಕಾರಣದಿಂದ ಜಲಾಶಯದ ನೀರಿನ ಮಟ್ಟದಲ್ಲಿ ಗಣನೀಯವಾಗಿ ಕುಸಿತ ಕಂಡಿದೆ. ಏಪ್ರಿಲ್‌ ಹಾಗೂ ಮೇ ತಿಂಗಳ ಬಿರು ಬೇಸಿಗೆ ವೇಳೆ ಉತ್ತರ ಕರ್ನಾಟಕ ಭಾಗದಲ್ಲಿ ನೀರಿನ ಸಮಸ್ಯೆ ತಲೆದೋರುವ ಮುನ್ಸೂಚನೆಯಂತೂ ಇದೆ.

ನೀರಿನ ಬೇಡಿಕೆ ದಿನೇ ದಿನೇ ಹೆಚ್ಚುತ್ತಿರುವ ಕಾರಣಕ್ಕೆ ಆಲಮಟ್ಟಿ. ನಾರಾಯಣಪುರ, ತುಂಗಭದ್ರಾ, ಘಟಪ್ರಭ, ಮಲಪ್ರಭಾ ಹಾಗೂ ಭದ್ರಾ ಜಲಾಶಯದಿಂದ ಹೊರ ಹ...