Bangalore, ಫೆಬ್ರವರಿ 27 -- Karnataka Tourism: ಕರ್ನಾಟಕದಲ್ಲಿ ಪ್ರವಾಸೋದ್ಯಮ ಅಭಿವೃದ್ದಿಗೆ ಸರ್ಕಾರವೂ ವಿಶೇಷ ಒತ್ತು ನೀಡುತ್ತಿದೆ. ಕರ್ನಾಟಕ ಪ್ರವಾಸೋದ್ಯಮ ನೀತಿ 2024-29 ನ್ನು ಜಾರಿ ಮಾಡಲಾಗಿದ್ದು, ಪ್ರವಾಸೋದ್ಯಮ ನೀತಿಯನ್ನು ಅನುಷ್ಠಾನಗೊಳಿಸಲು ನಾವು 1350 ಕೋಟಿ ರೂ.ಗಳ ಅನುದಾನವನ್ನು ಆಯವ್ಯಯದಲ್ಲಿ ಮೀಸಲಿರಿಸಲಾಗಿದೆ. ನಮ್ಮ ಇದು 8000 ಕೋಟಿ ರೂ.ಗಳ ನೇರ ಹೂಡಿಕೆಯನ್ನು ಆಕರ್ಷಿಸುವ ಹಾಗೂ 1.5 ಲಕ್ಷ ಉದ್ಯೋಗಾವಕಾಶಗಳನ್ನು ಸೃಜಿಸುವ ಗುರಿಯನ್ನು ಹೊಂದಿದೆ. ಈ ನೀತಿಯು ಪ್ರವಾಸೋದ್ಯಮ ಉದ್ಯಮಿಗಳು ಅಭಿವೃದ್ಧಿಹೊಂದಲು , ಆರ್ಥಿಕ ಬೆಳವಣಿಗೆಗೆ ಚಾಲನೆ ನೀಡಲು ಹಾಗೂ ಕರ್ನಾಟಕದ ಅಭಿವೃದ್ಧಿಗೆ ಬುನಾದಿಯಾಗಲಿದೆ. ಕಳೆದ ಎರಡು ವರ್ಷಗಳಲ್ಲಿ ನಮ್ಮ ಕರ್ನಾಟಕ ಸರ್ಕಾರವು ರಾಜ್ಯದ ಪ್ರವಾಸೋದ್ಯಮ ವಲಯದಲ್ಲಿ ಮೂಲಸೌಕರ್ಯ, ಉತ್ಪನ್ನ ಹಾಗೂ ಮಾನವ ಸಂಪನ್ಮೂಲ ಅಭಿವೃದ್ಧಿಗಾಗಿ 440 ಕೋಟಿ ರೂ.ಗಳನ್ನು ಮೀಸಲಿರಿಸಿದೆ.

ಇದು ಬೆಂಗಳೂರಿನಲ್ಲಿ ನಡೆದಿರುವ ಕರ್ನಾಟಕ ಅಂತರರಾಷ್ಟ್ರೀಯ ಪ್ರವಾಸೋದ್ಯಮ ಎಕ್ಸ್ಪೋ 2025 (KITE 2025)ನಲ್ಲಿ ಸ...