Bengaluru, ಏಪ್ರಿಲ್ 3 -- Karnataka Weather:ಕರ್ನಾಟಕದಲ್ಲಿ ಗುರುವಾರವೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಭಾರತೀಯ ಹವಾಮಾನ ಇಲಾಖೆಯ ಬೆಂಗಳೂರು ಪ್ರಾದೇಶಿಕ ಕೇಂದ್ರವು ನೀಡಿದೆ. ಅದರಲ್ಲೂ ಕರಾವಳಿ ಜಿಲ್ಲೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸೂಚನೆಯಿದೆ. ಇದಲ್ಲದೇ ಉತ್ತರ ಒಳನಾಡಿನ ಬೆಳಗಾವಿ, ಧಾರವಾಡ, ಹಾವೇರಿಯಲ್ಲಿ ಆಲಿಕಲ್ಲು ಸಹಿತ ಭಾರೀ ಮಳೆ ಸುರಿಯಬಹುದು. ಕೊಪ್ಪಳ, ಬಾಗಲಕೋಟೆ, ವಿಜಯಪುರ, ಕಲಬುರಗಿ, ಬೀದರ್‌, ಗದಗ ಜಿಲ್ಲೆಗಳಲ್ಲಿ ಗುಡುಗು ಸಹಿತ ಸಾಧಾರಣ ಮಳೆಯಾಗಬಹುದು. ಆಲಿಕಲ್ಲಿನ ಮಳೆಯೂ ಆಗಬಹುದು ಎನ್ನುವ ಸೂಚನೆಯನ್ನು ನೀಡಲಾಗಿದೆ. ದಕ್ಷಿಣ ಒಳನಾಡಿನ ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ ಹಾಗೂ ಕೊಡಗು ಜಿಲ್ಲೆಗಳ್ಲಲಿ ಗುಡುಗು ಸಹಿತ ಭಾರೀ ಮಳೆಯಾಗಲಿದೆ. ಬೆಂಗಳೂರು ನಗರ ಸೇರಿದಂತೆ ಕೆಲವು ಜಿಲ್ಲೆಗಳಲ್ಲಿ ಸಾಧಾರಣ ಮಳೆ ಗುಡುಗು ಸಹಿತ ಇರಲಿದೆ.

Published by HT Digital Content Services with permission from HT Kannada....